INDvENG: ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಮ್ಯಾಂಚೆಸ್ಟರ್‌ನಲ್ಲಿ ನಡೆದಿದ್ದು, ಭಾರತ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 190 ರನ್ಗಳನ್ನು ಹೊಡೆಯುವ ಮೂಲಕ ಇಂಗ್ಲೆಂಡ್ ತಂಡಕ್ಕೆ 191ರನ್ಗಳ ಗುರಿ ನೀಡಿದೆ. ಮತ್ತು ಟೀಂ ಇಂಡಿಯಾಕ್ಕೆ ಆಯ್ಕೆಯಾದ ಮೊದಲ ಪಂದ್ಯದಲ್ಲೇ ವೈಭವ್ ಸೂರ್ಯವಂಶಿ ಕೇವಲ 14 ರನ್ಗಳಿಸಿ ಔಟ್ ಆಗಿದ್ದಾರೆ.
ಮ್ಯಾಂಚೆಸ್ಟರ್‌ನ ಎಮಿರೇಟ್ಸ್ ಓಲ್ಡ್ ಟ್ರಾಫರ್ಡ್‌ನಲ್ಲಿ ಪಂದ್ಯ ನಡೆಯುತ್ತಿದ್ದು, ಕ್ಯಾಪ್ಟನ್ ಶ್ರೇಯಸ್ ಅಯ್ಯರ್ ಟಾಸ್ ಗೆದ್ದು ಮೊದಲ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಆರಂಭಿಕ ಆಟಗಾರರಾಗಿ ಅಭಿಷೇಕ್ ಶರ್ಮಾ ಮತ್ತು ಮೊದಲ ಭಾರಿ ಟೀಂ ಇಂಡಿಯಾ ತಂಡಕ್ಕೆ ಆಯ್ಕೆಯಾದ ವೈಭವ್ ಸೂರ್ಯವಂಶಿ ಕಣಕ್ಕಿಳಿದರು.
5 ಓವರ್ಗಳಲ್ಲಿ 50 ರನ್ಗಳಿಸಿರು. ವೈಭವ್ ಸೂರ್ಯವಂಶಿ ಎರಡು ಸಿಕ್ಸ್ ಬಾರಿಸುವ ಮೂಲಕ 10 ಎಸೆತಗಳಲ್ಲಿ 14 ರನ್ ಗಳಿಸಿದರು. ಆದರೆ ಐದನೇ ಓವರ್‌ನಲ್ಲಿ ವಿಲ್ ಜ್ಯಾಕ್ಸ್ ಓವರ್‌ನಲ್ಲಿ ಸ್ಟಂಪ್ ಔಟಾಗಿ ಅಭಿಮಾನಿಗಳನ್ನು ನಿರಾಸೆಗೊಳಿಸಿದರು. ಆದಾಗ್ಯೂ, ಅಭಿಷೇಕ್ ಶರ್ಮಾ ಬ್ಯಾಟಿಂಗ್ ಮುಂದುವರೆಸಿ 43 ರನ್ಗಳಿಸಿದರು.
ಬಳಿಕ ಮಧ್ಯದ ಓವರ್ಗಳಲ್ಲಿ ಶ್ರೇಯಸ್ ಅಯ್ಯರ್ ಮತ್ತು ಇಶಾನ್ ಕಿಶನ್ ಬ್ಯಾಟಿಂಗ್ ಮೂಲಕ ಭಾರತ ತಂಡ 190 ಉತ್ತಮ ರನ್ ಕಲೆಹಾಕಿತು. ಇಂಗ್ಲೆಂಡ್ ಪರ, ಸ್ಯಾಮ್ ಕರನ್ 33 ರನ್‌ಗೆ 3 ವಿಕೆಟ್ ಪಡೆಯುವ ಭಾರತದ ರನ್ ಗಳಿಕೆಯನ್ನು ತಡೆಗಟ್ಟಿದರು.