ಭೋಪಾಲ್: ಮಧ್ಯಪ್ರದೇಶದ ಗುಣಾದಲ್ಲಿ ಸೆಕೆಂಡ್ ಪಿಯುಸಿ ವಿದ್ಯಾರ್ಥಿನಿಯೊಬ್ಬಳಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ ಆರೋಪದ ಮೇಲೆ ಸರ್ಕಾರಿ ಶಾಲೆಯ ಗಣಿತ ಶಿಕ್ಷಕರೊಬ್ಬರನ್ನು ಬಂಧಿಸಲಾಗಿದೆ ಎಂದು ಬುಧವಾರ(ನ. 26) ವರದಿಯಾಗಿದೆ.
ಆ ಶಿಕ್ಷಕ ವಿದ್ಯಾರ್ಥಿನಿಗೆ ತನ್ನೊಂದಿಗೆ ದೈಹಿಕ ಸಂಬಂಧ ಬೆಳೆಸುವಂತೆ ಒತ್ತಡ ಹೇರಿದ್ದಲ್ಲದೆ, ಇದಕ್ಕೆ ಒಪ್ಪದಿದ್ದರೆ ಪರೀಕ್ಷೆಯಲ್ಲಿ ಕಡಿಮೆ ಅಂಕ ನೀಡುವುದಾಗಿ ಬೆದರಿಕೆ ಹಾಕಿದ್ದನು ಎಂದು ಆರೋಪಿಸಲಾಗಿದೆ. ವಿದ್ಯಾರ್ಥಿನಿ ನೀಡಿದ ದೂರಿನ ಪೊಲೀಸರು ನರೇಂದ್ರ ಕುಶ್ವಾಹ್ ಎಂಬ ಆರೋಪಿ ಶಿಕ್ಷಕನನ್ನು ಬಂಧಿಸಿದ್ದಾರೆ.
ದೂರಿನ ಪ್ರಕಾರ, ವಿದ್ಯಾರ್ಥಿನಿಯು ಹಲವು ಸಮಯದಿಂದ ಶಿಕ್ಷಕನಿಂದ ಕಿರುಕುಳ ಅನುಭವಿಸುತ್ತಿದ್ದಳು. ತನ್ನೊಂದಿಗೆ ಹೊರಗೆ ಬರುವಂತೆ ಮತ್ತು ದೈಹಿಕ ಸಂಬಂಧ ಬೆಳೆಸುವಂತೆ ಒತ್ತಡ ಹೇರಿದ್ದ ಎನ್ನಲಾಗಿದೆ. ವಿದ್ಯಾರ್ಥಿನಿಯು ತನ್ನ ಮಾತಿಗೆ ಒಪ್ಪದಿದ್ದಾಗ ಪರೀಕ್ಷೆಗಳಲ್ಲಿ ಕಡಿಮೆ ಅಂಕಗಳನ್ನು ನೀಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.
ಕೊನೆಗೆ ವಿದ್ಯಾರ್ಥಿನಿಯು ಪೊಲೀಸರನ್ನು ಸಂಪರ್ಕಿಸಿ ಶಿಕ್ಷಕನ ವಿರುದ್ಧ ದೂರು ನೀಡಿದಳು. ಇದರ ಬೆನ್ನಲ್ಲೇ ಪೊಲೀಸರು ಕಾಲೇಜಿಗೆ ತೆರಳಿ ಆತನನ್ನು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದಾರೆ (ಏಜೆನ್ಸೀಸ್).