ಸಾಂದರ್ಭಿಕ ಚಿತ್ರ 
ದೇಶ

ಕುಲ್ಗಾಮ್​ನಲ್ಲಿ ವಲಸೆ ಕಾರ್ಮಿಕರ ಮೇಲೆ ಉಗ್ರರಿಂದ ಗುಂಡಿನ ದಾಳಿ: ಓರ್ವ ಸಾವು, ಮತ್ತೊಬ್ಬನಿಗೆ ಗಂಭೀರ ಗಾಯ | Terrorists

ಶ್ರೀನಗರ: ದಕ್ಷಿಣ ಕಾಶ್ಮೀರದ ಕುಲ್ಗಮ್ ಜಿಲ್ಲೆಯ ಕೆಲ್ಲಾಮ್ ಪ್ರದೇಶದ ಇಟ್ಟಿಗೆ ಗೂಡು ಮೇಲೆ ಶುಕ್ರವಾರ(ಜು. 31) ಸಂಜೆ ಉಗ್ರರು(Terrorists) ಗುಂಡಿನ ದಾಳಿ ನಡೆಸಿದ್ದು, ಪರಿಣಾಮ ಒರ್ವ ವಲಸೆ ಕಾರ್ಮಿಕ ಮೃತಪಟ್ಟಿದ್ದು, ಮತ್ತೊಬ್ಬ ಗಂಭೀರ ಗಾಯಗೊಂಡಿದ್ದಾನೆ ಎಂದು ವರದಿಯಾಗಿದೆ.
ಕೆಲ್ಲಾಮ್​ನ ಇಟ್ಟಂಗಿ ಬಟ್ಟಿಯಲ್ಲಿ ಸಂಜೆ 6 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ತಡವಾಗಿ ಕೆಲಸ ಮಾಡುತ್ತಿದ್ದ ಇಬ್ಬರು ವಲಸೆ ಕಾರ್ಮಿಕರನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದ್ದು, ಅಧಿಕಾರಿಗಳು ತಕ್ಷಣ ಇಬ್ಬರನ್ನೂ ಚಿಕಿತ್ಸೆಗಾಗಿ ಸ್ಥಳಾಂತರಿಸಿದ್ದಾರೆ. ಛತ್ತೀಸ್‌ಗಢದ ನಿವಾಸಿ ದೀಪಕ್ ಆಸ್ಪತ್ರೆಗೆ ಕರೆದೊಯ್ಯುವ ಮುನ್ನವೇ ಮೃತಪಟ್ಟಿದ್ದಾರೆ.
ಗಂಭೀರವಾಗಿ ಗಾಯಗೊಂಡಿರುವ ಮತ್ತೊರ್ವ ಕಾರ್ಮಿಕ ಭೋಪಿಂದರ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಅನಂತನಾಗ್‌ನ ಸರ್ಕಾರಿ ವೈದ್ಯಕೀಯ ಕಾಲೇಜಿಗೆ (ಜಿಎಂಸಿ) ಕರೆದೊಯ್ಯಲಾಗಿದೆ. ಘಟನೆ ಬಳಿಕ ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿ, ಪ್ರದೇಶವನ್ನು ಸುತ್ತುವರೆದಿದ್ದು, ಉಗ್ರರನ್ನ ಪತ್ತೆಹಚ್ಚಲು ಶೋಧ ಕಾರ್ಯಾಚರಣೆ ಆರಂಭಿಸಿದ್ದು, ಸ್ಥಳದಲ್ಲಿ ಶೋಧ ಮುಂದುವರೆದಿದೆ (ಏಜೆನ್ಸೀಸ್).