ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿ 
ದೇಶ

2027ರ ಯುಪಿ ಚುನಾವಣೆಯಲ್ಲಿ ಮತ್ತೆ ಎನ್​ಡಿಎ ಭರ್ಜರಿ ಗೆಲುವು ಸಾಧಿಸಲಿದೆ: ನಿತಿನ್ ನವೀನ್ | Nitin Nabin

ಲಖನೌ: 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಮುನ್ನ ರಾಜ್ಯದ ರಾಜಕೀಯ ರಂಗೇರುತ್ತಿದ್ದು, ಭಾನುವಾರ(ಜು. 05) ಮುಂದಿನ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ನೇತೃತ್ವದ ಎನ್‌ಡಿಎ ಒಕ್ಕೂಟ ಭರ್ಜರಿ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್(Nitin Nabin) ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಉತ್ತರ ಪ್ರದೇಶಕ್ಕೆ ಎರಡು ದಿನಗಳ ಸಾಂಸ್ಥಿಕ ಭೇಟಿ ನೀಡಿರುವ ನಿತಿನ್ ನಬಿನ್, ಲಖನೌದಲ್ಲಿ ಪಕ್ಷದ ಪದಾಧಿಕಾರಿಗಳು ಮತ್ತು ಎನ್‌ಡಿಎ ಮೈತ್ರಿಕೂಟದ ಪಾಲುದಾರರೊಂದಿಗೆ ಪ್ರಮುಖ ಸಭೆ ನಡೆಸಿದರು. ಮತ್ತು ಪಕ್ಷದ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಉತ್ತರ ಪ್ರದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಡಬಲ್ ಎಂಜಿನ್ ಸರ್ಕಾರವು ಒದಗಿಸುತ್ತಿರುವ ಸೇವಾ ಮನೋಭಾವವು ಎನ್​ಡಿಎ ಮೈತ್ರಿಕೂಟವನ್ನು ಮತ್ತೆ ಅಧಿಕಾರಕ್ಕೆ ತರುತ್ತದೆ ಎಂದು ಹೇಳಿದ್ದಾರೆ.
ಚುನಾವಣಾ ಸ್ಪರ್ಧೆಯಲ್ಲಿ ಬಿಜೆಪಿ ಯಾವಾಗಲೂ ಮುಂದಿರುತ್ತದೆ. ಉತ್ತರ ಪ್ರದೇಶವನ್ನು ಅದ್ಭುತ ರಾಜ್ಯವನ್ನಾಗಿ ಮಾಡಲು ಎನ್ಡಿಎ ಮೈತ್ರಿಕೂಟದ ಎಲ್ಲಾ ಪಕ್ಷಗಳು ಒಟ್ಟಾಗಿ ಕೆಲಸ ಮಾಡಿವೆ. ಪ್ರಧಾನಿ ಮೋದಿ ಮತ್ತು ಸಿಎಂ ಯೋಗಿ ಆದಿತ್ಯನಾಥ್ ಅವರು ಜನರಿಗೆ ಒದಗಿಸುತ್ತಿರುವ ನಿರಂತರ ಸೇವೆಗಳು ಮತ್ತು ಕಲ್ಯಾಣ ಯೋಜನೆಗಳು ನಮ್ಮ ಮೇಲಿನ ಅವರ ನಂಬಿಕೆಯನ್ನು ಹೆಚ್ಚಿಸಿವೆ. 2027ರ ಚುನಾವಣೆಯಲ್ಲಿ ನಾವು ಭಾರಿ ಬಹುಮತದೊಂದಿಗೆ ಸರ್ಕಾರ ರಚಿಸುವುದು ಖಚಿತ ಎಂದು ತಿಳಿಸಿದ್ದಾರೆ (ಏಜೆನ್ಸೀಸ್).