ಇದು ಪ್ರಜಾಪ್ರಭುತ್ವದ ಹಾಗೂ ಜೆನ್-ಝಿ ವಿದ್ಯಾರ್ಥಿಗಳ ಹೋರಾಟಕ್ಕೆ ಸಿಕ್ಕ ಗೆಲುವು ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್
- ನೀಟ್ ಯುಜಿ ಪರೀಕ್ಷಾ ಅಕ್ರಮ ವಿವಾದ
- ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
- ಇದು ಪ್ರಜಾಪ್ರಭುತ್ವದ ಹಾಗೂ ಜೆನ್-ಝಿ ವಿದ್ಯಾರ್ಥಿಗಳ ಹೋರಾಟಕ್ಕೆ ಸಿಕ್ಕ ಗೆಲುವು ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್
ನವದೆಹಲಿ: ಕಳೆದ ಒಂದು ತಿಂಗಳಿನಿಂದ ನೀಟ್ ಯುಜಿ ಪರೀಕ್ಷೆಯಲ್ಲಿ ನಡಿದಿದ್ದ ಅಕ್ರಮವನ್ನು ವಿರೋಧಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು ಕೋರಿ, ಕಾಕ್ರೋಚ್ ಜನತಾ ಪಾರ್ಟಿ ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸುತ್ತಿತ್ತು.
ಇಂದು ಈ ಹೋರಾಟಕ್ಕೆ ಅಂತೀಮ ಜಯ ಎಂಬಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈಗ ಪ್ರಧಾನ್ ನೀಡಿದ ರಾಜೀನಾಮೆ ಕುರಿತು ರಾಷ್ಟ್ರ ಮಟ್ಟದಲ್ಲಿ ಚರ್ಚೆ ನಡೆಯುತ್ತಿದ್ದು, ಈ ಬಗ್ಗೆ ದೆಹಲಿಯ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal on Dharmendra Pradhan Resignation) ಹರ್ಷ ವ್ಯಕ್ತಪಡಿಸಿದ್ದಾರೆ.
ಪ್ರಧಾನ್ ರಾಜೀನಾಮೆ; ಪ್ರಜಾಪ್ರಭುತ್ವದ ಗೆಲುವು!
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಘೋಷಿಸುತ್ತಿದ್ದಂತೆ ಸೋಷಿಯಲ್ ಮೀಡಿಯಾನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿರುವ ಅರವಿಂದ್ ಕೇಜ್ರಿವಾಲ್, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ, ಇದು ಪ್ರಜಾಪ್ರಭುತ್ವಕ್ಕೆ ಸಿಕ್ಕ ಗೆಲುವಾಗಿದ್ದು, ಈ ಹೋರಾಟದಲ್ಲಿ ಭಾಗವಹಿಸಿದ ಎಲ್ಲರಿಗೂ, ಅದರಲ್ಲೂ ಜೆನ್ಝಿಗಳಿಗೆ ವಿಶೇಷ ಅಭಿನಂದನೆ ಎಂದಿದ್ದಾರೆ.
ಜನರಿಗೆ ಪ್ರಜಾಪ್ರಭುತ್ವದ ಮೇಲೆಯೇ ವಿಶ್ವಾಸ ಕಳೆದುಹೋಗಿತ್ತು, ತಮ್ಮ ಹಕ್ಕಿಗಾಗಿ ಬಿದಿಗೀಳುದು ಹೋರಾಟ ಮಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ ಈ ರಾಜೀನಾಮೆ ಭಾರತದಲ್ಲಿ ಪ್ರಜಾಪ್ರಭುತ್ವ ಜೀವಂತವಾಗಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ.
ನಮ್ಮ ಜೊತೆ ನಿಮ್ಮ ಆಟ ಬೇಡ: ಅಭಿಜಿತ್ ದೀಪ್ಕೆ
'ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟಿದ್ದಾರೆ. ನಾವು ಸಾಧಿಸಿದ್ದೇವೆ, ಪ್ರಜಾಪ್ರಭುತ್ವ ಗೆದ್ದಿದೆ, ಜಿರಳೆಗಳು ಗೆದ್ದಿವೆ. ಈಗ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಕ್ಕೆ 1 ಕೋಟಿ ಪರಿಹಾರ ನೀಡಬೇಕು ಮತ್ತು ಪೊಲೀಸರ ದೌರ್ಜನ್ಯದ ವಿರುದ್ಧ ಕ್ರಮ ಜರುಗಬೇಕು ಎಂದಿದ್ದಾರೆ.
ವಿದ್ಯಾರ್ಥಿಗಳ ಪೊಲೀಸರು ಲಾಠಿ ಬೀಸಿದ್ದೀರಿ ಅಲ್ವಾ? ನಮ್ಮ ಜೊತೆ ನಿಮ್ಮ ಆಟ ಬೇಡ. ವಿದ್ಯಾರ್ಥಿಗಳ ಮೇಲೆ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಕಾಕ್ರೋಚ್ ಪಾರ್ಟಿ ಸ್ಥಾಪಕ ಅಭಿಜಿತ್ ದೀಪ್ಕೆ ಹೇಳಿದ್ದಾರೆ, (ಏಜನ್ಸೀಸ್).