Assam Karbi Anglong | ಅಸ್ಸಾಂನ ಕರ್ಬಿ ಆಂಗ್ಲಾಂಗ್ ಜಿಲ್ಲೆಗಳಲ್ಲಿ ಹಿಂಸಾಚಾರ ಭುಗಿಲೆದ್ದಿದೆ. 
ದೇಶ

Assam Karbi Anglong | ಅಸ್ಸಾಂನ ಕರ್ಬಿ ಆಂಗ್ಲಾಂಗ್​ನಲ್ಲಿ ಭುಗಿಲೆದ್ದ ಹಿಂಸಾಚಾರ: ಹಿಂಸಾಚಾರ ನಿಯಂತ್ರಣಕ್ಕೆ ಇಂಟರ್ನೆಟ್ ಸ್ಥಗಿತಗೊಳಿಸಿದ ಅಸ್ಸಾಂ ಸರ್ಕಾರ

ಗುವಾಹಟಿ: ಅಸ್ಸಾಂನ ಕರ್ಬಿ ಆಂಗ್ಲಾಂಗ್‌ನ(Assam Karbi Anglong) ಎರಡು ಜಿಲ್ಲೆಗಳಲ್ಲಿ ಗುಂಪುಗಳ ನಡುವೆ ಘರ್ಷಣೆ ಭುಗಿಲೆದಿದ್ದು, ತೆರವು ಕಾರ್ಯಾಚರಣೆಯ ವೇಳೆ ಹೊಸ ಹಿಂಸಾಚಾರ ನೆಡೆದ ನಂತರ ಸರ್ಕಾರ ಇಂಟರ್ನೆಟ್ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.
ಈ ಗಲಭೆಯಲ್ಲಿ ಪ್ರತಿಭಟನಾಕಾರರ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಕನಿಷ್ಠ ಎಂಟು ಜನರು ಗಾಯಗೊಂಡಿದ್ದಾರೆ. ಅಲ್ಲದೆ, ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್ ಮತ್ತು ಅಶ್ರುವಾಯು ಶೆಲ್‌ಗಳನ್ನು ಹಾರಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಗೃಹ ಮತ್ತು ರಾಜಕೀಯ ಇಲಾಖೆ, ಹೆಚ್ಚಿನ ಸಾರ್ವಜನಿಕ ಶಾಂತಿ ಮತ್ತು ನೆಮ್ಮದಿಯನ್ನು ಕಾಪಾಡಿಕೊಳ್ಳುವ ಹಿತದೃಷ್ಟಿಯಿಂದ ಮತ್ತು ಪ್ರಸ್ತುತ ಪರಿಸ್ಥಿತಿ ಹದಗೆಡದಂತೆ ತಡೆಯಲು, ಇಂಟರ್ನೆಟ್ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಗೃಹ ಮತ್ತು ರಾಜಕೀಯ ಇಲಾಖೆ ಅಧಿಕೃತ ಆದೇಶದಲ್ಲಿ ತಿಳಿಸಿದೆ.

ಮುಂದಿನ ಆದೇಶ ಬರುವವರೆಗೂ ಇಂಟರ್ನೆಟ್ ಸ್ಥಗಿತ

ಮುಂದಿನ ಆದೇಶದವರೆಗೆ ಅಮಾನತು ಜಾರಿಯಲ್ಲಿರುತ್ತದೆ. ಅದರೆ, ಸ್ಥಿರ ದೂರವಾಣಿ ಮಾರ್ಗಗಳನ್ನು ಆಧರಿಸಿದ ಧ್ವನಿ ಕರೆಗಳು ಮತ್ತು ಬ್ರಾಡ್‌ಬ್ಯಾಂಡ್ ಸಂಪರ್ಕವು ಈ ಅವಧಿಯಲ್ಲಿ ಕಾರ್ಯನಿರ್ವಹಿಸುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ ಎಂದು ಆದೇಶದಲ್ಲಿ ಹೇಳಿದೆ.

48 ಪೊಲೀಸರಿಗೆ ಗಾಯ

ಸರ್ಕಾರದೊಂದಿಗೆ ಮಾತನಾಡುತ್ತಿದೆ ಮತ್ತು ದಿನಾಂಕವನ್ನು ನಿಗದಿಪಡಿಸಲಾಗಿದೆ. ಪ್ರತಿಭಟನಾಕಾರರು ಅಂಗಡಿಗಳನ್ನು ಸುಟ್ಟುಹಾಕಿದ್ದಾರೆ ಮತ್ತು ಇಲ್ಲಿಯವರೆಗೆ 48 ಪೊಲೀಸರು ಗಾಯಗೊಂಡಿದ್ದಾರೆ ಎಂದು ಅಸ್ಸಾಂ ಡಿಜಿಪಿ ಹರ್ಮೀತ್ ಸಿಂಗ್ ತಿಳಿಸಿದ್ದಾರೆ.
ಕರ್ಬಿ ಆಂಗ್ಲಾಂಗ್ ಮತ್ತು ಪಶ್ಚಿಮ ಕರ್ಬಿ ಆಂಗ್ಲಾಂಗ್ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಗಂಭೀರ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯ ಬಗ್ಗೆ ವರದಿಗಳನ್ನು ಸ್ವೀಕರಿಸಿದ್ದಾರೆ. ಸಾರ್ವಜನಿಕ ಶಾಂತಿ ಮತ್ತು ನೆಮ್ಮದಿಗೆ ಭಂಗ ಉಂಟಾಗುವ ಸಾಧ್ಯತೆಯ ಬಗ್ಗೆ ಗಂಭೀರ ಆತಂಕವಿದೆ ಎಂದು ಹೇಳಿದೆ.

ಹಿಮಂತ ಬಿಸ್ವಾ ಶರ್ಮಾ ಹೇಳಿದ್ದೇನು..?

ಇದಕ್ಕೂ ಮುನ್ನ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಕರ್ಬಿ ಆಂಗ್ಲಾಂಗ್‌ನಲ್ಲಿನ ಪರಿಸ್ಥಿತಿ ತುಂಬಾ ಸೂಕ್ಷ್ಮ ಎಂದು ಹೇಳಿದ್ದರು. ಹಿರಿಯ ಸಚಿವ ರಾನೋಜ್ ಪೆಗು ಜಿಲ್ಲೆಯಲ್ಲಿದ್ದಾರೆ. ಈ ವಿಷಯ ಶೀಘ್ರದಲ್ಲೇ ಬಗೆಹರಿಯುತ್ತದೆ ಎಂದು ನಾನು ನಂಬುತ್ತೇನೆ ಎಂದು ಕಾರ್ಯಕ್ರಮವೊಂದರ ನೇಪಥ್ಯದಲ್ಲಿ ಶರ್ಮಾ ಹೇಳಿದರು,(ಏಜೆನ್ಸೀಸ್).