ತೇಜ್ ಪ್ರತಾಪ್ ಯಾದವ್ 
ದೇಶ

ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹಿಂಸಾಚಾರ; ಲಾಲು ಯಾದವ್ ಹಿರಿಯ ಪುತ್ರ ತೇಜ್ ಪ್ರತಾಪ್ ಬಂಧನ | Tej Pratap Yadav

ಪಾಟ್ನಾ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಅಕ್ರಮ ಹೊಣೆಗಾರಿಕೆ ಕೋರಿ ಬಿಹಾರದ ಪಾಟ್ನಾದಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದ ಬಳಿಕ ಜನಶಕ್ತಿ ಜನತಾದಳ (ಜೆಎಸ್‌ಜೆಡಿ) ಮುಖ್ಯಸ್ಥ ತೇಜ್ ಪ್ರತಾಪ್ ಯಾದವ್(Tej Pratap Yadav) ಅವರನ್ನು ಪಾಟ್ನಾ ಪೊಲೀಸರು ಬಂಧಿಸಿದ್ದಾರೆ.
ಶನಿವಾರ(ಜು. 25) ಸಂಜೆ ಡಾಕ್ ಬಾಂಗ್ಲಾ ಚೌರಾಹಾ ಬಳಿ ತೇಜ್ ಪ್ರತಾಪ್ ಅವರನ್ನು ಬಂಧಿಸಿ ಮಧ್ಯರಾತ್ರಿಯ ನಂತರ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು. ಮ್ಯಾಜಿಸ್ಟ್ರೇಟ್ ಅವರನ್ನು 14 ದಿನಗಳ ನ್ಯಾಯಾಂಗ ಕಸ್ಟಡಿಗೆ ಒಪ್ಪಿಸಿದ್ದಾರೆ. ಸದ್ಯ ಅವರು ಬೇಯೂರ್ ಕೇಂದ್ರ ಜೈಲಿನಲ್ಲಿದ್ದಾರೆ.
ನೀಟ್ ಪತ್ರಿಕೆ ಸೋರಿಕೆ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ, ದೆಹಲಿಯಲ್ಲಾದ ವಿದ್ಯಾರ್ಥಿಗಳ ಮೇಲಿನ ದಬ್ಬಾಳಿಕೆಯನ್ನು ವಿರೋಧಿಸಿ ವಿರೋಧ ಪಕ್ಷಗಳು ಮತ್ತು ಸಾಮಾಜಿಕ ಸಂಘಟನೆಗಳು ಶನಿವಾರ ಬಿಹಾರ ಬಂದ್‌ಗೆ ಕರೆ ನೀಡಿದ್ದವು. ಪಾಟ್ನಾದಲ್ಲಿ ಸಾವಿರಾರು ವಿದ್ಯಾರ್ಥಿಗಳು ಮತ್ತು ಯುವಕರು ಪ್ರತಿಭಟನೆ ನಡೆಸಿದ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆ ಹಿಂಸಾಚಾರ ನಡೆದಿತ್ತು.
ಈ ಸಮಯದಲ್ಲಿ ತೇಜ್ ಪ್ರತಾಪ್ ಯಾದವ್ ಅವರು ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಬೆಂಬಲವಾಗಿ ಪಾಟ್ನಾದ ರಾಮ್ ಗುಲಾಮ್ ಚೌಕ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಎನ್ನಲಾಗಿದೆ. ಕೇಂದ್ರ ಸರ್ಕಾರವು ವಿದ್ಯಾರ್ಥಿಗಳ ಸಮಸ್ಯೆಗಳನ್ನು ತಕ್ಷಣ ಪರಿಹರಿಸಬೇಕೆಂದು ಒತ್ತಾಯಿಸಿದ್ದರು. ಪ್ರತಿಭಟನೆ ಹಿಂಸಾರೂಪ ಪಡೆಯುತ್ತಿದ್ದಂತೆ ಅಲ್ಲಿಂದಲೇ ಪೊಲೀಸರು ಅವರನ್ನು ಬಂಧಿಸಿದ್ದಾರೆ (ಏಜೆನ್ಸೀಸ್).