ಸಿಎಂ ಎಂ.ಕೆ.ಸ್ಟಾಲಿನ್ ಮತ್ತು ದಳಪತಿ ವಿಜಯ್ 
ದೇಶ

ಯಾರೇ ಬಂದರೂ ಅವರನ್ನು ಎದುರಿಸುತ್ತೇವೆ; ದಳಪತಿ ವಿಜಯ್ ರಾಜಕೀಯ ಎಂಟ್ರಿ ಬಗ್ಗೆ ಸಿಎಂ ಎಂ.ಕೆ.ಸ್ಟಾಲಿನ್ ಮೊದಲ ಮುಕ್ತ​ ಪ್ರತಿಕ್ರಿಯೆ | CM M K Stalin

ಚೆನ್ನೈ: ಯಾರೇ ಬಂದರೂ ಅವರನ್ನು ಎದುರಿಸುತ್ತೇವೆ, ನಮಗೆ ಯಾವುದೇ ಚಿಂತೆ ಇಲ್ಲ ಎಂದು ಚುನಾವಣಾ ರಾಜಕೀಯಕ್ಕೆ ಇಳಿದಿರುವ ನಟ ದಳಪತಿ ವಿಜಯ್ ಅವರ ರಾಜಕೀಯ ಪ್ರವೇಶದ ಎದುರಿಸುವಿಕೆ ಬಗ್ಗೆ ಇದೇ ಮೊದಲ ಬಾರಿಗೆ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್(CM M K Stalin) ಮುಕ್ತ ಹೇಳಿಕೆ ನೀಡಿದ್ದಾರೆ.
ವಿರಲಿಮಲೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಡಿಎಂಕೆ ಯಾವುದೇ ಸವಾಲನ್ನು ಎದುರಿಸಲು ಸಿದ್ಧವಾಗಿದೆ. ಪಕ್ಷವು ಚಿಂತಿಸುತ್ತಿಲ್ಲ. ಸಾರ್ವಜನಿಕರು ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಅದಕ್ಕೆ ತಕ್ಕಂತೆ ಪ್ರತಿಕ್ರಿಯಿಸುತ್ತಾರೆ. ಹಾಗೂ ಶೀಘ್ರದಲ್ಲೇ ಬದಲಾಗುತ್ತಾರೆ ಎಂದು ಹೇಳಿದ್ದಾರೆ.
234 ಕ್ಷೇತ್ರಗಳಲ್ಲೂ ಡಿಎಂಕೆ ಮೈತ್ರಿಕೂಟ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಅವರು, ವಿರೋಧ ಪಕ್ಷದ ನಾಯಕ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರ ಇತ್ತೀಚಿನ ಹೇಳಿಕೆಗಳು ಹತಾಶೆ ಮತ್ತು ಸೋಲಿನ ಭಯವನ್ನು ಪ್ರತಿಬಿಂಬಿಸುತ್ತವೆ. ದ್ರಾವಿಡ ಪಕ್ಷವೊಂದು ದೆಹಲಿಯಿಂದ ನಿಯಂತ್ರಿಸಲ್ಪಡುತ್ತಿರುವುದು ಆತಂಕಕಾರಿ ಎಂದು ಎಐಎಡಿಎಂಎ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ತಮಿಳುನಾಡು ವಿಧಾನಸಭಾ ಚುನಾವಣೆ ಏಪ್ರಿಲ್ 23ರಂದು ಒಂದೇ ಹಂತದಲ್ಲಿ ನಡೆಯಲಿದ್ದು, ಮೇ 4 ರಂದು ಎಣಿಕೆ ನಡೆಯಲಿದೆ. ಡಿಎಂಕೆ ನೇತೃತ್ವದ ಕಾಂಗ್ರೆಸ್, ಡಿಎಂಡಿಕೆ ಹಾಗೂ ವಿಸಿಕೆ ಸೇರಿ ಎಡಪಕ್ಷಗಳ ಇಂಡಿಯಾ ಒಕ್ಕೂಟ ಮತ್ತು ಎಐಎಡಿಎಂಕೆ ನೇತೃತ್ವದ ಬಿಜೆಪಿ, ಪಿಎಂಕೆ ಎನ್​ಡಿಎ ಒಕ್ಕೂಟದ ನಡುವೆ ನೇರ ಸ್ಪರ್ಧೆ ನಡೆಯಲಿದೆ. ಹಾಗೆ ಇದೇ ಮೊದಲ ಬಾರಿಗೆ ನಟ ವಿಜಯ್ ಅವರ ಟಿವಿಕೆ ಕೂಡ ಚೊಚ್ಚಲ ಚುನಾವಣೆ ರಾಜಕೀಯ ಪ್ರವೇಶ ಮಾಡಿದೆ (ಏಜೆನ್ಸೀಸ್).