ದೇಶ

ಸೋನಿಯಾ ಗಾಂಧಿಯವರ ಆತ್ಮಚರಿತ್ರೆ ಪುಸ್ತಕ ಬಿಡುಗಡೆ; 2004ರಲ್ಲಿ ಪ್ರಧಾನಿ ಹುದ್ದೆ ನಿರಾಕರಿಸಿದ್ದೇಕೆ? ವಿವರಿಸಿರುವ ಕಾಂಗ್ರೆಸ್ ಅಧಿನಾಯಕಿ | Sonia Gandhi

ಕಾಂಗ್ರೆಸ್ ಅಧಿನಾಯಕಿ ಮತ್ತು ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ 'ಬಿಲಾಂಗಿಂಗ್: ಎ ಜರ್ನಿ ಆಫ್ ಲವ್' ಪುಸ್ತಕ ಇಂದು(ನ. 10) ವಿಶ್ವದಾದ್ಯಂತ ಬಿಡುಗಡೆಯಾಗಿದ್ದು, ಎಲ್ಲಾ ಮಳಿಗೆಗಳಿಗೆ ರವಾನೆಯಾಗಿದೆ. ಈ ಪುಸ್ತಕದಲ್ಲಿ, ಕಾಂಗ್ರೆಸ್ ನಾಯಕಿ ತಮ್ಮ ಜೀವನದ ಬಗ್ಗೆ ಹಲವು ಪ್ರಮುಖ ವಿಷಯಗಳನ್ನು ಬಹಿರಂಗಪಡಿಸಿದ್ದಾರೆ.

ನವದೆಹಲಿ: ಕಾಂಗ್ರೆಸ್ ಅಧಿನಾಯಕಿ ಮತ್ತು ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ 'ಬಿಲಾಂಗಿಂಗ್: ಎ ಜರ್ನಿ ಆಫ್ ಲವ್' ಪುಸ್ತಕ ಇಂದು(ನ. 10) ವಿಶ್ವದಾದ್ಯಂತ ಬಿಡುಗಡೆಯಾಗಿದ್ದು, ಎಲ್ಲಾ ಮಳಿಗೆಗಳಿಗೆ ರವಾನೆಯಾಗಿದೆ. ಈ ಪುಸ್ತಕದಲ್ಲಿ, ಕಾಂಗ್ರೆಸ್ ನಾಯಕಿ ತಮ್ಮ ಜೀವನದ ಬಗ್ಗೆ ಹಲವು ಪ್ರಮುಖ ವಿಷಯಗಳನ್ನು ಬಹಿರಂಗಪಡಿಸಿದ್ದಾರೆ.

ಬಿಲಾಂಗಿಂಗ್: ಎ ಜರ್ನಿ ಆಫ್ ಲವ್' ಪುಸ್ತಕದಲ್ಲಿ ಅವರ ವೈಯಕ್ತಿಕ ಜೀವನ, ಪ್ರೀತಿ, ಕುಟುಂಬ, ರಾಜಕೀಯ ಪ್ರಯಾಣ ಮತ್ತು ಭಾರತದೊಂದಿಗಿನ ಸಂಪರ್ಕದಂತಹ ಹಲವು ವಿಷಯಗಳ ಬಗ್ಗೆ ಬೆಳಕು ಚೆಲ್ಲಿದ್ದಾರೆ. ಮತ್ತು ಮಹತ್ವದ ವಿಷಯಗಳನ್ನು ಬಹಿರಂಗ ಪಡಿಸಿದ್ದಾರೆ.