ಬಿಜೆಪಿ ರಾಜ್ಯಾಧ್ಯಕ್ಷ ನೈನಾರ್ ನಾಗೇಂದ್ರನ್
ಚೆನ್ನೈ: ತಮಿಳುನಾಡಿನಲ್ಲಿ ದಳಪತಿ ವಿಜಯ್ ಸರ್ಕಾರ ರಚಿಸಲು ಒದ್ದಾಡುತ್ತಿರುವ ನಡುವೆಯೂ, ಸರ್ಕಾರ ರಚಿಸಲು ಬಿಜೆಪಿ ಯಾವುದೇ ಪ್ರಯತ್ನದಲ್ಲಿ ಭಾಗಿಯಾಗುವುದಿಲ್ಲ, ಯಾವುದೇ ಪಕ್ಷಕ್ಕೂ ಬೆಂಬಲ ನೀಡುವುದಿಲ್ಲ ಎಂದು ಬಿಜೆಪಿ ಹೇಳಿದೆ.
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನೈನಾರ್ ನಾಗೇಂದ್ರನ್, ಜನರ ಕಲ್ಯಾಣ ಮತ್ತು ಪ್ರಗತಿಗೆ ಸೇವೆ ಸಲ್ಲಿಸುವ ಗುರಿಯೊಂದಿಗೆ ಪಕ್ಷವು ಚುನಾವಣೆಯಲ್ಲಿ ಸ್ಪರ್ಧಿಸಿದೆ. ಚುನಾವಣೆಯಲ್ಲಿ ಜನರು ಸರ್ಕಾರ ರಚಿಸಲು ಬಿಜೆಪಿಗೆ ಯಾವುದೇ ಅವಕಾಶ ಅಥವಾ ಜನಾದೇಶವನ್ನು ನೀಡಿಲ್ಲ. ಅವರ ತೀರ್ಪನ್ನು ಒಪ್ಪಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.
ವಿಧಾನಸಭಾ ಚುನಾವಣಾ ಫಲಿತಾಂಶದ ನಂತರ ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಬಿಜೆಪಿ ಯಾವುದೇ ಪ್ರಯತ್ನದಲ್ಲಿ ಭಾಗಿಯಾಗುವುದಿಲ್ಲ. ಯಾವುದೇ ಪಕ್ಷವನ್ನು ಬೆಂಬಲಿಸಿ ನಾವು ಮತ ಚಲಾಯಿಸುವುದಿಲ್ಲ ಎಂದಿದ್ದಾರೆ.
ತಮಿಳುನಾಡು ಚುನಾವಣೆಯಲ್ಲಿ ಎಐಎಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ, 27 ಸ್ಥಾನಗಳಲ್ಲಿ ಸ್ಪರ್ಧಿಸಿತ್ತು. ಆದರೆ ಊಟಿ ಜಿಲ್ಲೆಯ ಒಂದು ಕ್ಷೇತ್ರದಲ್ಲಿ ಗೆಲುವು ಸಾಧಿಸಿದೆ (ಏಜೆನ್ಸೀಸ್).