ರೈಲಿಗೆ ಬೆಂಕಿ ಹೊತ್ತಿಕೊಂಡಿರುವ ದೃಶ್ಯ 
ದೇಶ

ನಿನ್ನೆ ನಿಜಾಮುದ್ದೀನ್ ರಾಜಧಾನಿ ಎಕ್ಸ್ ಪ್ರೆಸ್​ಗೆ; ಇಂದು ಬಿಹಾರದಲ್ಲಿ ಮತ್ತೊಂದು ಪ್ಯಾಸೆಂಜರ್​ಗೆ ರೈಲಿಗೆ ಬೆಂಕಿ | passenger train

ನವದೆಹಲಿ: ನಿನ್ನೆ(ಮೇ 18) ಬೆಳಗ್ಗೆ ಹಜರತ್ ನಿಜಾಮುದ್ದೀನ್ ರಾಜಧಾನಿ ಎಕ್ಸ್​ಪ್ರೆಸ್​​ನ ಒಂದು ಎಸಿಗೆ ಬೋಗಿಗೆ ಹೊತ್ತಿದ್ದ ಬೆಂಕಿ, ಇಂದು ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳುತ್ತಿದ್ದ ಪ್ಯಾಸೆಂಜರ್ ರೈಲಿಗೆ ಬೆಂಕಿ(passenger train) ಹೊತ್ತಿಕೊಂಡಿದೆ ಎಂದು ವರದಿಯಾಗಿದೆ.
ಇಂದು ಬೆಳಗ್ಗೆ ಘಟನೆ ನಡೆದಿದೆ. ಪ್ರಾಥಮಿಕ ತನಿಖೆಯ ಪ್ರಕಾರ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ. ಬೆಂಕಿಯನ್ನು ನಿಯಂತ್ರಿಸಲು ಸಿಬ್ಬಂದಿ ಹರಸಾಹಸ ಪಡುತ್ತಿದ್ದು, ರೈಲು ಬೋಗಿಯಿಂದ ದಟ್ಟವಾದ ಹೊಗೆ ಹೊರಬರುತ್ತಿರುವ ದೃಶ್ಯಗಳು ಕಂಡುಬಂದಿವೆ.
ಸಸಾರಾಮ್-ಪಾಟ್ನಾ ಫಾಸ್ಟ್ ಪ್ಯಾಸೆಂಜರ್ ರೈಲಿನ ಬೋಗಿಯು ಸಸಾರಾಮ್ ರೈಲ್ವೆ ನಿಲ್ದಾಣದ ಆರನೇ ಪ್ಲಾಟ್‌ಫಾರ್ಮ್‌ನಲ್ಲಿದ್ದಾಗ ಅದು ಹೊರಡಲು ನಿಗದಿಪಡಿಸಿದ ಸ್ವಲ್ಪ ಸಮಯ ಮೊದಲು ಬೆಂಕಿ ಹೊತ್ತಿಕೊಂಡಿದೆ. ಬೆಂಕಿಯ ಅವಘಡವು ಪ್ಲಾಟ್‌ಫಾರ್ಮ್‌ನಲ್ಲಿದ್ದ ಪ್ರಯಾಣಿಕರಲ್ಲಿ ಭಯಭೀತತೆಯನ್ನು ಉಂಟುಮಾಡಿತು, ಆದರೆ ಯಾವುದೇ ಸಾವುನೋವುಗಳು ಸಂಭವಿಸಿಲ್ಲ.
ಭಾನುವಾರ ಮಧ್ಯಪ್ರದೇಶದ ರತ್ಲಂನಲ್ಲಿ ದೆಹಲಿಗೆ ತೆರಳುತ್ತಿದ್ದ ರಾಜಧಾನಿ ಎಕ್ಸ್‌ಪ್ರೆಸ್‌ನ ಹವಾನಿಯಂತ್ರಿತ ಬೋಗಿಗಳಲ್ಲಿ ಒಂದರಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿತ್ತು. ವಿಕ್ರಮ್‌ಗಢ ಅಲೋಟ್ ಮತ್ತು ಲುನಿ ರಿಚಾ ನಿಲ್ದಾಣಗಳ ನಡುವೆ ಈ ಘಟನೆ ನಡೆದಿದೆ. ಒಂದು ಎಸಿ ಕೋಚ್ ಸಂಪೂರ್ಣ ಬೆಂಕಿಗಾಹುತಿಯಾಗಿತ್ತು (ಏಜೆನ್ಸೀಸ್).