Yuzvendra Chahal 
ದೇಶ

ಚಹಾಲ್-ಮಹ್ವಾಶ್ ಸ್ನೇಹಕ್ಕೆ ಬ್ರೇಕ್? ಇನ್‌ಸ್ಟಾಗ್ರಾಮ್‌ನಲ್ಲಿ ಪರಸ್ಪರ ಅನ್‌ಫಾಲೋ ಮಾಡಿದ ಜೋಡಿ.. Yuzvendra Chahal

ಮುಂಬೈ: ಭಾರತದ ಸ್ಟಾರ್ ಕ್ರಿಕೆಟಿಗ ಯುಜ್ವೇಂದ್ರ ಚಹಾಲ್ (Yuzvendra Chahal) ಮತ್ತು ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ಆರ್.ಜೆ. ಮಹ್ವಾಶ್ (RJ Mahvash) ನಡುವಿನ ಸಂಬಂಧದ ಬಗ್ಗೆ ಹರಿದಾಡುತ್ತಿದ್ದ ಸುದ್ದಿಗೆ ಈಗ ಹೊಸ ಟ್ವಿಸ್ಟ್ ಸಿಕ್ಕಿದೆ.
ಯುಜ್ವೇಂದ್ರ ಚಹಾಲ್ ಮತ್ತು ಧನಶ್ರೀ ವರ್ಮಾ ಅವರು 2025ರ ಆರಂಭದಲ್ಲಿ ವಿಚ್ಛೇದನ ಪಡೆದು ತಮ್ಮ ದಾಂಪತ್ಯ ಜೀವನವನ್ನು ಅಂತ್ಯಗೊಳಿಸಿದ್ದರು. ಇದಾದ ಬಳಿಕ ಚಹಾಲ್ ಅವರ ಹೆಸರು ಆರ್.ಜೆ. ಮಹ್ವಾಶ್ ಅವರೊಂದಿಗೆ ತಳುಕು ಹಾಕಿಕೊಂಡಿತ್ತು. ಇವರಿಬ್ಬರು ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿಗಳು ಹರಡಿದ್ದವು. ಇದೀಗ ಯುಜ್ವೇಂದ್ರ ಚಹಾಲ್ ಮತ್ತು ಆರ್.ಜೆ. ಮಹ್ವಾಶ್ ಇನ್‌ಸ್ಟಾಗ್ರಾಮ್‌ನಲ್ಲಿ ಪರಸ್ಪರ ಅನ್‌ಫಾಲೋ ಮಾಡಿದ್ದಾರೆ ಎಂಬ ಸುದ್ದಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗಿದೆ.
ಈ ಹಿಂದೆ ಪಾಡ್‌ಕಾಸ್ಟ್ ಒಂದರಲ್ಲಿ ಮಾತನಾಡಿದ್ದ ಚಹಾಲ್, ತಾವು ಯಾರೊಂದಿಗೂ ಡೇಟಿಂಗ್ ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದರು. ತಮಗೆ ಮತ್ತೆ ಪ್ರೀತಿಯಲ್ಲಿ ಬೀಳಲು ಸಮಯ ಬೇಕು ಮತ್ತು ಸದ್ಯಕ್ಕೆ ತಮ್ಮ ಮೇಲೆಯೇ ತಾವು ಗಮನ ಹರಿಸುತ್ತಿರುವುದಾಗಿ ಹೇಳಿದ್ದರು. ಅಲ್ಲದೆ, ಪಾಪರಾಜಿಗಳು ತಮ್ಮ ಸ್ನೇಹಿತರ ಜೊತೆಗಿರುವ ಫೋಟೋಗಳನ್ನು ತಪ್ಪು ರೀತಿಯಲ್ಲಿ ಬಿಂಬಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದರು.
ಈ ಮೊದಲು ಇನ್‌ಸ್ಟಾಗ್ರಾಮ್‌ನಲ್ಲಿ ಪರಸ್ಪರ ಫಾಲೋ ಮಾಡುತ್ತಿದ್ದ ಚಹಾಲ್ ಮತ್ತು ಮಹ್ವಶ್, ಈಗ ಒಬ್ಬರನ್ನೊಬ್ಬರು ಅನ್‌ಫಾಲೋ ಮಾಡಿದ್ದಾರೆ. ಸೆಲೆಬ್ರಿಟಿಗಳ ಫೋಟೋಗಳನ್ನು ಹಂಚಿಕೊಳ್ಳುವ ವರಿಂದರ್ ಚಾವ್ಲಾ ಅವರು ಈ ವಿಷಯವನ್ನು ಮೊದಲು ಗಮನಿಸಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಚಹಾಲ್ ಅವರು ತಾವು "ಸಿಂಗಲ್" ಎಂದು ಹೇಳಿಕೊಂಡ ಕೆಲವು ತಿಂಗಳುಗಳ ನಂತರ ಈ ಬೆಳವಣಿಗೆ ನಡೆದಿದೆ. ಈ ಅನ್‌ಫಾಲೋ ವಿಷಯದ ಬಗ್ಗೆ ಚಹಾಲ್ ಆಗಲಿ ಅಥವಾ ಮಹ್ವಶ್ ಆಗಲಿ ಈವರೆಗೆ ಯಾವುದೇ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ.