ಸೋಮವಾರಪೇಟೆ ತಾಲೂಕಿನ ಬೀದಳ್ಳಿಯಲ್ಲಿ ಪ್ರಕೃತಿ ನಡಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿಲಾಯಿತು. ಜಡೇಗೌಡ, ಕಾರಿಯಪ್ಪ ಇದ್ದರು. 
ನ್ಯೂಸ್

ಬೀದಳ್ಳಿಯಲ್ಲಿ ಪ್ರಕೃತಿ ನಡಿಗೆ ಕಾರ್ಯಕ್ರಮ

ಸೋಮವಾರಪೇಟೆ: 71ನೇ ವನ್ಯಜೀವಿ ಸಪ್ತಾಹ -2025 ಅಂಗವಾಗಿ ಪುಷ್ಪಗಿರಿ ಚಾರಣ ಪ್ರವೇಶ ದ್ವಾರ, ಬೀದಳ್ಳಿಯಲ್ಲಿ ಗುರುವಾರ ಪ್ರಕೃತಿ ನಡಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಜನರಲ್ಲಿ ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಾಣ ಹಾಗೂ ಪ್ರಕೃತಿ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲಾಯಿತು. ಕಾರ್ಯಕ್ರಮವನ್ನು ಪೊನ್ನಂಪೇಟೆಯ ಅರಣ್ಯ ಕಾಲೇಜಿನ ಪ್ರೊ.ಡಾ.ಜಡೇಗೌಡ ಹಾಗೂ ಮಡಿಕೇರಿ ವನ್ಯಜೀವಿ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ವಿ.ಪಿ.ಕಾರಿಯಪ್ಪ ಉದ್ಘಾಟಿಸಿದರು.

ಮಡಿಕೇರಿ ವನ್ಯಜೀವಿ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ವಿ.ಪಿ.ಕಾರಿಯಪ್ಪ ಮಾತನಾಡಿ, ಮುಂದಿನ ದಿನಗಳಲ್ಲಿ ಶಾಲಾ-ಕಾಲೇಜುಗಳಲ್ಲಿ ವನ್ಯಜೀವಿ ಸಪ್ತಾಹದ ಅಂಗವಾಗಿ ವಿವಿಧ ಜಾಗೃತಿ ಕಾರ್ಯಕ್ರಮಗಳು, ಸ್ವಚ್ಛತಾ ಅಭಿಯಾನ, ಸ್ಪರ್ಧೆಗಳು ಮತ್ತು ಶೈಕ್ಷಣಿಕ ಚಟುವಟಿಕೆ ಆಯೋಜಿಸಲಾಗುವುದು ಎಂದು ತಿಳಿಸಿದರು.