ಮುಂಬೈ: ನಟ, ನಟಿಯರು ಸಿನಿಮಾ ವಿಚಾರವಾಗಿ ಸುದ್ದಿಯಾಗುವುದಕ್ಕಿಂತ ವೈಯಕ್ತಿಕ ವಿಚಾರವಾಗಿ ಸುದ್ದಿಯಾಗುವುದು ಹೆಚ್ಚಾಗಿದೆ. ಬಾಲಿವುಡ್ ಖ್ಯಾತ ನಟ ನವಾಜುದ್ದೀನ್ ಸಿದ್ದಿಕಿ ಮತ್ತು ಪತ್ನಿ ಆಲಿಯಾ ನಡುವಿನ ಜಗಳಕ್ಕೆ ಇದೀಗ ಹೊಸ ತಿರುವು ಸಿಕ್ಕಿದ್ದು, ಸ್ವತಃ ಗಂಡನ ವಿರುದ್ಧವೇ ನಟನ ಪತ್ನಿ ಆಲಿಯಾ ರೇಪ್ ಕೇಸ್ ದಾಖಲಿಸಿದ್ದಾರೆ.
ಆಲಿಯಾ ಈ ಕುರಿತು ಅವರು ಸಾಮಾಜಿಕ ಜಾಲತಾಣದಲ್ಲಿ ಹಲವು ವಿಚಾರಗಳನ್ನೂ ಹಂಚಿಕೊಂಡಿದ್ದಾರೆ. ನವಾಜ್ ಅತ್ಯಾಚಾರ ಮಾಡಿದ್ದಾರೆ. ತಮ್ಮನ್ನು ಮನೆಯಿಂದ ಆಚೆ ಹಾಕಲು ಏನೆಲ್ಲ ತಂತ್ರಗಳನ್ನು ಅವರು ಹೂಡಿದ್ದರು ಎಂದು ಬಹಿರಂಗವಾಗಿಯೇ ಹೇಳಿಕೊಂಡಿದ್ದಾರೆ.
ಇದನ್ನೂ ಓದಿ: ಮನೆಗೆ ಬಂದ ಅತ್ತೆಗೆ ಚಾಕುವಿನಿಂದ ಇರಿದ ಅಳಿಯ!
ಈ ಕುರಿತು ಆಲಿಯಾ ಮಾತನಾಡಿದ್ದು, 'ತಮ್ಮ ಮಕ್ಕಳನ್ನು ನವಾಜುದ್ದೀನ್ ಕರೆದುಕೊಂಡು ಹೋಗಲು ಪ್ರಯತ್ನಿಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ನನ್ನ ಮಕ್ಕಳನ್ನು ಅವನಿಗೆ ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ. ಮಕ್ಕಳನ್ನು ತಮಗೆ ಕೊಡಬೇಕು ಎಂದು ನವಾಜುದ್ದೀನ್ ಕೋರ್ಟ್ ಮೊರೆ ಹೋಗಿದ್ದಾರೆ. ಹುಟ್ಟಿದಾಗಿಂದ ಈವರೆಗೂ ಮಕ್ಕಳ ಬಗ್ಗೆ ಕಾಳಜಿ ತೋರಿಸದೇ ಇರುವವನು, ಈಗೇಕೆ ಇಷ್ಟೊಂದು ಪ್ರೀತಿ ಬಂದಿದೆ ಎಂದು ಅರ್ಥವಾಗುತ್ತಿಲ್ಲ'ಎಂದಿದ್ದಾರೆ.
'ಸಮಾಜದ ಮುಂದೆ ತಾವು ಮಹಾನ್ ವ್ಯಕ್ತಿ ಎಂದು ತೋರಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಅತಿ ಹಿಂಸೆಯನ್ನೂ ನನಗೆ ನೀಡಿದ್ದಾರೆ. ನಾನು ವರ್ಸೋವಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ' ಎಂದು ಹೇಳಿದ್ದಾರೆ.