ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಖ್ಯಾತ ರಾಜಕೀಯ ನಾಯಕರು, ಕ್ರೀಡಾಪಟುಗಳು, ಸಂಗೀತಗಾರರು, ಚಿತ್ರರಂಗದ ಗಣ್ಯರ ಜೀವನ ಚರಿತ್ರೆ ಆಧಾರಿತ ಚಿತ್ರಗಳು ಬರುತ್ತಿವೆ. ಬಂದಿರುವ ಹಲವು ಚಿತ್ರಗಳು ಪ್ರೇಕ್ಷಕರ ಮನಸೂರೆಗೊಂಡಿವೆ. ಈ ಹಿನ್ನೆಲೆಯಲ್ಲಿ ಖ್ಯಾತ ಗಾಯಕಿ ಎಂ.ಎಸ್.ಸುಬ್ಬುಲಕ್ಷ್ಮಿ ಅವರ ಜೀವನ ಚರಿತ್ರೆ ಬೆಳ್ಳಿತೆರೆ ಮೇಲೆ ರೂಪುಗೊಳ್ಳಲಿದೆ.
ವಾಸ್ತವವಾಗಿ ಈ ಜೀವನಚರಿತ್ರೆಯ ಬಗ್ಗೆ ಸ್ವಲ್ಪ ಸಮಯದ ಹಿಂದೆ ಸುದ್ದಿ ಇತ್ತು. ಬಾಲಿವುಡ್ ನಟಿ ವಿದ್ಯಾ ಬಾಲನ್ ಈ ಚಿತ್ರದ ಪ್ರಮುಖ ಪಾತ್ರ ನಿರ್ವಹಿಸುತ್ತಾರೆ ಎನ್ನಲಾಗುತ್ತಿತ್ತು. ಆದರೆ, ಈಗ ಆ ಪಾತ್ರದಲ್ಲಿ ನಯನತಾರಾ ನಟಿಸಲಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು ಮೂಲದ ನಿರ್ಮಾಣ ಸಂಸ್ಥೆ ಈ ಯೋಜನೆಯನ್ನು ಕೈಗೆತ್ತಿಕೊಂಡಿದ್ದು. ಪ್ರಮುಖ ಪಾತ್ರಗಳಿಗೆ ನಯನತಾರಾ, ರಶ್ಮಿಕಾ ಮಂದಣ್ಣ, ತ್ರಿಶಾ ಕೃಷ್ಣನ್ ಮತ್ತು ಇತರರ ಹೆಸರನ್ನು ಪರಿಗಣಿಸುತ್ತಿದೆ. ಕನ್ನಡ, ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಚಿತ್ರೀಕರಣಗೊಳ್ಳಲಿರುವ ಈ ಚಿತ್ರದಲ್ಲಿ ನಯನತಾರಾ ಆಯ್ಕೆಗೆ ಆದ್ಯತೆ ನೀಡಲಾಗಿದೆ ಎಂದು ವರದಿಯಾಗಿದೆ.