ನ್ಯೂಸ್

ನೀಟ್ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳು

Bengaluru - Political - Shivananda Tagadur

ಬೆಂಗಳೂರು:
ಕೋಲಾರದ ವಿದ್ಯಾಜ್ಯೋತಿ ಪದವಿಪೂರ್ವ ಕಾಲೇಜು, ವಿಜ್ಞಾನ ವಿಭಾಗದಲ್ಲಿ, 2023-
24 ನೇ ಸಾಲಿನಲ್ಲಿ ವಿದ್ಯಾರ್ಥಿಗಳು ನೀಟ್ ಪರೀಕ್ಷೆಯನ್ನು ತೆಗೆದುಕೊಂಡಿದ್ದು, ಅದರಲ್ಲಿ ತ್ರಿಷಾ ಎಂ (675/720) ಎಂಬ ವಿದ್ಯಾರ್ಥಿಯು ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ರಾಷ್ಟ್ರ ಮಟ್ಟದ ಪರೀಕ್ಷೆಯಲ್ಲಿ 500 ಕ್ಕಿಂತಲೂ ಹೆಚ್ಚು ಅಂಕಗಳನ್ನು 39 ವಿದ್ಯಾರ್ಥಿಗಳು ಪಡೆದುಕೊಂಡಿದ್ದಾರೆ. ಕಾಲೇಜಿನಲ್ಲಿ ನೀಟ್ ಪರೀಕ್ಷೆ ಬರೆದಂತಹ ಸುಮಾರು 300 ವಿದ್ಯಾರ್ಥಿಗಳಲ್ಲಿ 275 ವಿದ್ಯಾರ್ಥಿಗಳು ಅರ್ಹತೆ ಪಡೆದುಕೊಂಡಿರುವುದಕ್ಕೆ ಕಾಲೇಜಿನ ಆಡಳಿತ ಮಂಡಳಿ ಮತ್ತು ಪ್ರಾಂಶುಪಾಲರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಉಪನ್ಯಾಸಕರ ಶ್ರಮ ಮತ್ತು ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.