ನ್ಯೂಸ್

ನೀಟ್ ವಿರುದ್ದ ಮೇಲ್ಮನೆಯಲ್ಲಿ ನಿರ್ಣಯ

Bengaluru - Political - Shivananda Tagadur

ಬೆಂಗಳೂರು:

ನೀಟ್ ಪರೀಕ್ಷಾ ವ್ಯವಸ್ಥೆಯನ್ನು ರದ್ದುಪಡಿಸಬೇಕು ಎಂದು ವಿಧಾನ ಪರಿಷತ್ ನಿರ್ಣಯ ಅಂಗೀಕರಿಸಿದೆ.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೀಟ್ ಪರೀಕ್ಷಾ ವ್ಯವಸ್ಥೆಯು, ಗ್ರಾಮೀಣ ಬಡ ಮಕ್ಕಳ ವೈದ್ಯಕೀಯ ಶಿಕ್ಷಣಾವಕಾಶಗಳ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ. ಶಾಲಾ ಶಿಕ್ಷಣ ವ್ಯವಸ್ಥೆಯನ್ನು ನಿರರ್ಥಕಗೊಳಿಸುವುದು ಅಲ್ಲದೆ, ರಾಜ್ಯ ಸರ್ಕಾರದ ವೈದ್ಯಕೀಯ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವ ರಾಜ್ಯ ಸರ್ಕಾರದ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ. ಆದ್ದರಿಂದ ಅದನ್ನು ರದ್ದುಪಡಿಸಬೇಕೆಂದು ಕೋರಿದರು.

ನೀಟ್ ಪರೀಕ್ಷೆಯಿಂದ ಕರ್ನಾಟಕಕ್ಕೆ ವಿನಾಯತಿ ನೀಡಬೇಕೆಂದು ಹಾಗೂ ಶಾಲಾ ಶಿಕ್ಷಣದಲ್ಲಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಅಂಕಗಳನ್ನಾಧರಿಸಿ ವೈದ್ಯಕೀಯ ಕಾಲೇಜುಗಳಿಗೆ ಪ್ರವೇಶಾತಿ ನೀಡಬೇಕೆಂದರು.

ನೀಟ್ ಪರೀಕ್ಷೆಗಳಲ್ಲಿ ಆಗುತ್ತಿರುವ ಪುನಾರಾವರ್ತಿತ ಅಕ್ರಮಗಳನ್ನು ಪರಿಗಣಿಸಿ ರಾಷ್ಟ್ರೀಯ ಮಟ್ಟದಲ್ಲಿ ನೀಟ್ ವ್ಯವಸ್ಥೆ ರದ್ದುಪಡಿಸಬೇಕು. ಕೇಂದ್ರ ಸರ್ಕಾರವು ರಾಷ್ಟ್ರೀಯ ವೈದ್ಯಕೀಯ ಆಯೋಗ ಅಧಿನಿಯಮ, 2019 (2019 ಕೇಂದ್ರ ಅಧಿನಿಯಮ 30) ರಲ್ಲಿ ಅಗತ್ಯ ತಿದ್ದುಪಡಿಗಳನ್ನು ಸಹ ಮಾಡುವಂತೆ ನಿರ್ಣಯವನ್ನು ಮಂಡಿಸಿದ್ದರು.