ನವದೆಹಲಿ: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಪರೀಕ್ಷೆಯನ್ನೇ ರದ್ದುಗೊಳಿಸಬೇಕು ಎಂಬ ಆಗ್ರಹಗಳು ಕೇಳಿಬರುತ್ತಿವೆ. ಮತ್ತೊಂದೆಡೆ, ಅಕ್ರಮ ನಡೆದಿರುವ ಹಿನ್ನೆಲೆಯಲ್ಲಿ ಯುಜಿಸಿ ನೆಟ್ (ಯುಜಿಸಿ-ರಾಷ್ಟ್ರೀಯ ಅರ್ಹತಾ ಪರೀಕ್ಷೆ ಪರೀಕ್ಷೆ ನಡೆದ ಒಂದೇ ದಿನದಲ್ಲಿ ಕೇಂದ್ರ ಸರ್ಕಾರ ಪರೀಕ್ಷೆಯನ್ನೇ ರದ್ದುಗೊಳಿಸಿದೆ. ಇದರ ಬೆನ್ನಲ್ಲೇ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ನಡೆಸುವ ನೀಟ್-ಪಿಜಿ(NEET-PG) ವೈದ್ಯಕೀಯ ಪ್ರವೇಶ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ನಾಳೆ (ಜೂನ್ 23) ರಂದು ನಡೆಯಲಿರುವ NEET-PG ಪ್ರವೇಶ ಪರೀಕ್ಷೆಯನ್ನು ಮುಂದೂಡಲು ನಿರ್ಧರಿಸಲಾಗಿದೆ. ಈ ಪರೀಕ್ಷೆಯ ಹೊಸ ದಿನಾಂಕವನ್ನು ಶೀಘ್ರದಲ್ಲಿಯೇ ಪ್ರಕಟಿಸಲಾಗುವುದು ಶೀಘ್ರದಲ್ಲೇ ಹೊಸ ದಿನಾಂಕ ಪ್ರಕಟಿಸಲಾಗುವುದು ಎಂದು ತಿಳಿಸಲಾಗುವುದು ಎಂದು ತಿಳಿಸಿದೆ.
ವಿದ್ಯಾರ್ಥಿಗಳಿಗೆ ಉಂಟಾದ ಅನಾನುಕೂಲತೆಗಾಗಿ ಆರೋಗ್ಯ ಸಚಿವಾಲಯವು ಪ್ರಾಮಾಣಿಕವಾಗಿ ವಿಷಾದಿಸುತ್ತದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮತ್ತು ಪರೀಕ್ಷಾ ಪ್ರಕ್ರಿಯೆಯ ಪಾವಿತ್ರ್ಯತೆಯನ್ನು ಕಾಪಾಡಿಕೊಳ್ಳಲು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.