ನ್ಯೂಸ್

ನೀಟ್: ಇದೇ ಮೊದಲ ಬಾರಿಗೆ ಮೊದಲ ಸ್ಥಾನ ಹಂಚಿಕೊಂಡ ರಾಜ್ಯದ ಮೂವರು ವಿದ್ಯಾರ್ಥಿಗಳು

ಎನ್.ಎಲ್. ಶಿವಮಾದು

ಬೆಂಗಳೂರು ವೈದ್ಯಕೀಯ ಮತ್ತು ದಂತವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್-24) ಲಿತಾಂಶ ಪ್ರಕಟವಾಗಿದೆ. ಇದೇ ಮೊದಲ ಬಾರಿಗೆ ರಾಷ್ಟ್ರ ಮಟ್ಟದಲ್ಲಿ ರಾಜ್ಯದ ಮೂವರು ವಿದ್ಯಾರ್ಥಿಗಳು ಮೊದಲ ರ‌್ಯಾಂಕ್ ಅನ್ನು ಹಂಚಿಕೊಂಡಿದ್ದಾರೆ.

ಸಿಇಟಿ ಪಶುವೈದ್ಯಕೀಯ, ಬಿ-ಾರ್ಮಾ, ಾರ್ಮಾ ಡಿ, ನರ್ಸಿಂಗ್‌ನಲ್ಲಿ ಮೊದಲ ರ‌್ಯಾಂಕ್ ಪಡೆದಿದ್ದ ಬೆಂಗಳೂರಿನ ಮಾರತ್ತಹಳ್ಳಿಯ ಶ್ರೀ ಚೈತನ್ಯ ಟೆಕ್ನೋ ಸ್ಕೂಲ್‌ನ ಕಲ್ಯಾಣ್ ವಿ. ಕಸುವನಹಳ್ಳಿಯ ನಾರಾಯಣ ಕಾಲೇಜಿನ ವಿದ್ಯಾರ್ಥಿ ಶ್ಯಾಮ್ ಶ್ರೇಯಸ್ ಜೋಸ್ೆ, ಅರ್ಜುನ್ ಕಿಶೋರ್ ಅವರು 720ಕ್ಕೆ 720 ಅಂಕ (99.997129)ಗಳನ್ನು ಪಡೆದಿದ್ದಾರೆ.

ರಾಷ್ಟ್ರಮಟ್ಟದಲ್ಲಿ ಟಾಪ್ ಮೊದಲ ಸ್ಥಾನವನ್ನು 67 ಮಂದಿ ಹಂಚಿಕೊಂಡಿದ್ದಾರೆ. ಟಾಪ್ 100 ವಿದ್ಯಾರ್ಥಿಗಳ ಪಟ್ಟಿಯಲ್ಲಿ ರಾಜ್ಯದ ಪದ್ಮನಾಭ್ ಮೆನನ್, ಪ್ರಜ್ಞಾ ಪಿ.ಶೆಟ್ಟಿ, ಖುಷಿ ಮಗನೂರ್ ಸ್ಥಾನ ಪಡೆದಿದ್ದಾರೆ.

89 ಸಾವಿರ ವಿದ್ಯಾರ್ಥಿಗಳು ಅರ್ಹತೆ:

ಕರ್ನಾಟಕದಿಂದ ನೋಂದಣಿ ಮಾಡಿಕೊಂಡಿದ್ದ 1.55 ಲಕ್ಷ ವಿದ್ಯಾರ್ಥಿಗಳ ಪೈಕಿ 1.50 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಇದರಲ್ಲಿ 89,088 ವಿದ್ಯಾರ್ಥಿಗಳು ಪ್ರವೇಶ ಪಡೆಯಲು ಅರ್ಹತೆ ಪಡೆದಿದ್ದಾರೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ, ಈ ವರ್ಷ ರಾಜ್ಯದಿಂದ ಪರೀಕ್ಷೆ ತೆಗೆದುಕೊಂಡವರ ಪ್ರಮಾಣ ಹೆಚ್ಚಾಗಿದೆ. 2023ರಲ್ಲಿ ರಾಜ್ಯದಿಂದ 1.31 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.