ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ KSRTC ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಡಿ.31ರಂದು ಕರೆ ನೀಡಿದ್ದ ಸಾರಿಗೆ ಮುಷ್ಕರವನ್ನು ಹಿಂಪಡೆಯಲಾಗಿದೆ ಎಂದು ಭಾನುವಾರ ಘೋಷಿಸಿವೆ.
ಇಂದು ಮುಖ್ಯಮಂತ್ರಿ ಕಾವೇರಿ ನಿವಾಸದಲ್ಲಿ ಕರೆದಿದ್ದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯಲ್ಲಿ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಮತ್ತು ಇಲಾಖೆಯು 4 ನಿಗಮಗಳ ವ್ಯವಸ್ಥಾಪಕರು ಭಾಗಿಯಾಗಿದ್ದರು. ನೌಕರರ ಸಮಸ್ಯೆ ಅಲಿಸಿದ ಸರ್ಕಾರ, ವಿವಿಧ ಬೇಡಿಕೆ ಈಡೇರಿಕೆಗೆ ಸಂಕ್ರಾತಿ ಬಳಿಕ ಮತ್ತೆ ಸಭೆ ಮಾಡುವುದಾಗಿ ಸಿಎಂ ತಿಳಿಸಿದ್ದಾರೆ. ಬೇಡಿಕೆ ಈಡೇರಿಸುವ ಬಗ್ಗೆ ಸಿಎಂ ಭರವಸೆ ಕೊಟ್ಟಿದ್ದಾರೆ ಎನ್ನಲಾಗಿದೆ. ಸಿಎಂ ಮನವಿ ಮೇರೆಗೆ ಮುಷ್ಕರ ಹಿಂಪಡೆದಿದ್ದಾರೆ.(ಹೆಚ್ಚಿನ ಮಾಹಿತಿ ನಿರೀಕ್ಷಿಸಿ)