ನ್ಯೂಸ್

ಫೇಸ್‌ಬುಕ್, ಯೂಟ್ಯೂಬ್ ಮೇಲಿನ ನಿಷೇಧ ತೆರವು! ನೇಪಾಳ ಗೃಹ ಸಚಿವರು ರಾಜೀನಾಮೆ...social media ban

ನೇಪಾಳ: (social media ban ) ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ವಾಟ್ಸಾಪ್, ಯೂಟ್ಯೂಬ್ ಮತ್ತು ಸ್ನ್ಯಾಪ್‌ಚಾಟ್ ಸೇರಿದಂತೆ 26 ಪ್ರಮುಖ ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ನಿಷೇಧಿಸುವ ನೇಪಾಳ ಸರ್ಕಾರದ ಇತ್ತೀಚಿನ ನಿರ್ಧಾರವು ದೇಶಾದ್ಯಂತ ವ್ಯಾಪಕ ಪ್ರತಿಭಟನೆಗಳನ್ನು ಹುಟ್ಟುಹಾಕಿದೆ. ಈ ಬೆನ್ನಲ್ಲೇ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.

ಗಲಭೆಯ ಜವಾಬ್ದಾರಿಯನ್ನು ಹೊತ್ತು ನೇಪಾಳದ ಗೃಹ ಸಚಿವ ರಮೇಶ್ ಲೇಖಕ್ ರಾಜೀನಾಮೆ ನೀಡಿದರು. ರಮೇಶ್ ಲೇಖಕ್ ತಮ್ಮ ರಾಜೀನಾಮೆ ಪತ್ರವನ್ನು ಪ್ರಧಾನಿಗೆ ಸಲ್ಲಿಸಿದರು.

ಕೊನೆಗೂ ಪ್ರತಿಭಟನೆಗಳಿಗೆ ಮಣಿದ ನೇಪಾಳ ಸರ್ಕಾರ, ಸಾಮಾಜಿಕ ಮಾಧ್ಯಮದ ಮೇಲಿನ ನಿಷೇಧವನ್ನು ತೆಗೆದುಹಾಕಿದೆ. ಆದರೆ, ಪ್ರತಿಭಟನಾಕಾರರು ಮಣಿಯುತ್ತಿಲ್ಲ. ಈ ಪ್ರತಿಭಟನೆಗಳ ಹಿಂದೆ ವಿದೇಶಿ ಪಿತೂರಿ ಇದೆ ಎಂದು ನೇಪಾಳ ಸರ್ಕಾರ ಹೇಳುತ್ತಿದೆ.

ನಡೆದಿದ್ದೇನು?:

ವಿಶೇಷವಾಗಿ ಜನರೇಷನ್ (GEN-Z ) Z (1990 ರ ದಶಕದ ಉತ್ತರಾರ್ಧ ಮತ್ತು 2000 ರ ದಶಕದ ಆರಂಭದಲ್ಲಿ ಜನಿಸಿದ ಯುವಕರು) ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗಿಳಿದು ಪ್ರತಿಭಟಿಸಿದರು. ಕಠ್ಮಂಡು ಸೇರಿದಂತೆ ಹಲವಾರು ಪ್ರದೇಶಗಳಲ್ಲಿ ಪ್ರತಿಭಟನಾಕಾರರು ಬೀದಿಗಿಳಿದು ಸರ್ಕಾರದ ನಿರ್ಧಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಸೋಮವಾರ ಮಧ್ಯಾಹ್ನ 12:30 ರಿಂದ ರಾತ್ರಿ 10 ರವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಕಠ್ಮಂಡುವಿನ ಮುಖ್ಯ ಜಿಲ್ಲಾ ಅಧಿಕಾರಿ ಚಾಬಿಲಾಲ್ ರಿಜಲ್ ಘೋಷಿಸಿದರು.

ನ್ಯಾಯಾಲಯದ ಆದೇಶದಂತೆ ಕಂಪನಿಗಳಿಗೆ ನೋಂದಾಯಿಸಲು ಏಳು ದಿನಗಳ ಕಾಲಾವಕಾಶ ನೀಡಲಾಗಿತ್ತು, ಆದರೆ ಅವೆಲ್ಲವೂ ಗಡುವಿನೊಳಗೆ ನೋಂದಾಯಿಸಲು ವಿಫಲವಾಗಿವೆ ಎಂದು ಸಂವಹನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ತಿಳಿಸಿದೆ. ಆದ್ದರಿಂದ, ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ನಿಷೇಧಿಸಲಾಗಿದೆ ಎಂದು ಸಚಿವಾಲಯದ ನೋಟಿಸ್‌ನಲ್ಲಿ ತಿಳಿಸಲಾಗಿದೆ. ಆದಾಗ್ಯೂ, ಟಿಕ್‌ಟಾಕ್ ಸೇರಿದಂತೆ ಕೇವಲ ಐದು ಕಂಪನಿಗಳು ಮಾತ್ರ ಆದೇಶವನ್ನು ಪಾಲಿಸಿವೆ. ಅವುಗಳ ಮೇಲೆ ಯಾವುದೇ ನಿರ್ಬಂಧಗಳನ್ನು ವಿಧಿಸಲಾಗಿಲ್ಲ. ನೇಪಾಳದಲ್ಲಿ ಹೆಚ್ಚಿನ ಸಂಖ್ಯೆಯ ಕುಟುಂಬ ಸದಸ್ಯರು ವಿದೇಶದಲ್ಲಿ ವಾಸಿಸುತ್ತಿದ್ದಾರೆ. ಕೆಲವರು ಕೆಲಸ ಮಾಡುತ್ತಿದ್ದಾರೆ. ಸಂಬಂಧಿಕರೊಂದಿಗೆ ಸಂವಹನ ನಡೆಸಲು ಅವರು ಸಾಮಾಜಿಕ ಮಾಧ್ಯಮ ಮತ್ತು ಸಂದೇಶ ಕಳುಹಿಸುವ ಅಪ್ಲಿಕೇಶನ್‌ಗಳನ್ನು ಹೆಚ್ಚು ಅವಲಂಬಿಸಿದ್ದಾರೆ. ಪ್ರಸ್ತುತ, ನೇಪಾಳ ಸರ್ಕಾರ ತೆಗೆದುಕೊಂಡ ನಿರ್ಧಾರದಿಂದಾಗಿ ಅಲ್ಲಿ ಗೊಂದಲದ ಪರಿಸ್ಥಿತಿ ಇದೆ.

ದೊಡ್ಡ ಪ್ರಮಾಣದ ಹಿಂಸಾಚಾರ ಭುಗಿಲೆದ್ದಿತು. ಪೊಲೀಸರು ಗುಂಡು ಹಾರಿಸಿದರು. ಗುಂಡಿನ ದಾಳಿಯಲ್ಲಿ 20 ಜನರು ಸಾವನ್ನಪ್ಪಿದರು. 300 ಕ್ಕೂ ಹೆಚ್ಚು ಜನರು ಗಾಯಗೊಂಡರು.  ಗಲಭೆಯ ಜವಾಬ್ದಾರಿಯನ್ನು ಹೊತ್ತು ನೇಪಾಳದ ಗೃಹ ಸಚಿವ ರಮೇಶ್ ಲೇಖಕ್ ರಾಜೀನಾಮೆ ನೀಡಿದರು. ರಮೇಶ್ ಲೇಖಕ್ ತಮ್ಮ ರಾಜೀನಾಮೆ ಪತ್ರವನ್ನು ಪ್ರಧಾನಿಗೆ ಸಲ್ಲಿಸಿದರು.