Urinated: ದೊಡ್ಡ ಉದ್ಯಮಿ ಕುಟುಂಬದ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ಕೃತ್ಯವು ಕುಟುಂಬ ಸದಸ್ಯರನ್ನು ಇದೀಗ ಸಂಕಷ್ಟಕ್ಕೆ ಸಿಲುಕಿಸಿದೆ.
ಹೌದು, ಉತ್ತರ ಪ್ರದೇಶದ ಬಿಕ್ಕೋರ್ ಜಿಲ್ಲೆಯ ನಗೀನಾದಲ್ಲಿ ನಡೆದ ಘಟನೆಯೊಂದು ಎಲ್ಲರನ್ನೂ ಬೆಚ್ಚಿಬೀಳಿಸಿದೆ. ಈ ಘಟನೆಯು ಯಾವುದೇ ಸಾಮಾನ್ಯ ಕಳ್ಳತನ ಅಥವಾ ಜಗಳವಲ್ಲ, ಬದಲಾಗಿ ಅಡುಗೆಮನೆಯಲ್ಲಿ ಇರಿಸಲಾದ ಪಾತ್ರೆಗಳ ಮೇಲೆ ಮೂತ್ರ ಸಿಂಪಡಿಸುವಂತಹ ಅಮಾನವೀಯ ಕೃತ್ಯವಾಗಿದೆ. ಈ ಸಂಪೂರ್ಣ ಕೃತ್ಯವು ಮನೆಯಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದು ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಚರ್ಚೆಯ ವಿಷಯವಾಗಿದೆ.
ಇದನ್ನೂ ಓದಿ:ಕೇವಲ 45 ಎಸೆತದಲ್ಲಿ ಶತಕ: ಮೈದಾನದಲ್ಲಿ ಅಬ್ಬರಿಸಿ ಬೊಬ್ಬರಿದ ರಿಂಕು, ಸಿಕ್ಸರ್-ಬೌಂಡರಿಗಳ ಸುರಿಮಳೆ! Rinku Singh
ಕ್ಯಾಮೆರಾದಲ್ಲಿ ಸೆರೆಯಾದ ಅಸಹ್ಯಕರ ಕೃತ್ಯ: ಮಧ್ಯಾಹ್ನ ಕೆಲಸಕ್ಕೆಂದು ಮನೆಗೆ ತಲುಪಿದ ಮಹಿಳೆ ಎಂದಿನಂತೆ ಅಡುಗೆಮನೆಯಲ್ಲಿ ಪಾತ್ರೆ ತೊಳೆಯಲು ಪ್ರಾರಂಭಿಸಿದಳು. ಮಹಿಳೆ ಮೊದಲು ಗಾಜಿನ ಲೋಟದಲ್ಲಿ ಮೂತ್ರ ವಿಸರ್ಜನೆ ಮಾಡಿ ನಂತರ ಅದೇ ಮೂತ್ರವನ್ನು ಅಡುಗೆಮನೆಯಲ್ಲಿ ಇರಿಸಲಾಗಿದ್ದ ಇತರ ಪಾತ್ರೆಗಳ ಮೇಲೆ ಸಿಂಪಡಿಸಿದ್ದು ವೀಡಿಯೊದಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದೆ. ಈ ಘಟನೆಯನ್ನು ನೋಡಿದ ಕುಟುಂಬ ಸದಸ್ಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಈ ಘಟನೆಯ ವಿಡಿಯೋವನ್ನು ಮನೆಯ ಸದಸ್ಯರೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ಕೆಲವೇ ಕ್ಷಣಗಳಲ್ಲಿ ವೈರಲ್ ಆಗಿದೆ. ಜನರು ಇದಕ್ಕೆ ವಿಭಿನ್ನ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ. ಕೆಲವರು ಇದನ್ನು ಅಮಾನವೀಯ ಕೃತ್ಯ ಎಂದು ಕರೆಯುತ್ತಿದ್ದರೆ, ಇನ್ನು ಕೆಲವರು ಇದನ್ನು ಮಾನಸಿಕ ಅಸ್ವಸ್ಥತೆಗೆ ಸಂಬಂಧಿಸಿದೆ ಎಂದು ಹೇಳುತ್ತಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆ ದೂರಿನ ಆಧಾರದ ಮೇಲೆ ಆರೋಪಿಯನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಆರೋಪಿ ಸಮಂತ್ರ ಎಂದು ಗುರುತಿಸಿಲಾಗಿದ್ದು, ಗುರುವಾರ ವಿಡಿಯೋ ಕಾಣಿಸಿಕೊಂಡ ನಂತರ ಮಹಿಳೆಯನ್ನು ಬಂಧಿಸಲಾಗಿದೆ ಎಂದು ನಗೀನಾ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಸಂಜಯ್ ಕುಮಾರ್ ತಿಳಿಸಿದ್ದಾರೆ.(ಏಜೆನ್ಸೀಸ್)