ತರೀಕೆರೆ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಶಾಸಕ ಜಿ.ಎಚ್.ಶ್ರೀನಿವಾಸ್ ಉದ್ಘಾಟಿಸಿದರು. ಡಾ. ಕೆ.ಜೆ.ಕಾಂತರಾಜ್, ಬಿ.ಗೋವಿಂದಪ್ಪ ಇತರರಿದ್ದರು. 
ನ್ಯೂಸ್

ಕ್ರೀಡೆಯಿಂದ ಹೊಸ ಚೈತನ್ಯ

ತರೀಕೆರೆ: ಆರೋಗ್ಯ ಉತ್ತಮವಾಗಿರಿಸಲು ಕ್ರೀಡೆ ಅವಶ್ಯಕ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.

ಪಟ್ಟಣದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಶನಿವಾರ ಆಯೋಜಿಸಿದ್ದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕ್ರೀಡೆಯಿಂದ ಮನಸ್ಸಿನ ಒತ್ತಡ ಕಡಿಮೆಯಾಗಿ ಹೊಸ ಚೈತನ್ಯ ಮೂಡುತ್ತದೆ. ಸರ್ಕಾರ ಶಿಕ್ಷಣಕ್ಕೆ ಹೆಚ್ಚಿನ ಉತ್ತೇಜನ ನೀಡುತ್ತಿದ್ದು ಶಿಕ್ಷಕರು ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಸರ್ಕಾರಿ ಶಾಲೆಗಳ ಉಳಿವಿಗೆ ಪ್ರಯತ್ನಿಸಬೇಕು ಎಂದರು. ಎಸಿ ಡಾ. ಕೆ.ಜೆ.ಕಾಂತರಾಜ್ ಮಾತನಾಡಿ, ಕ್ರೀಡಾಕೂಟಗಳು ಸುಪ್ತ ಪ್ರತಿಭೆ ಹೊರಹೊಮ್ಮಲು ಸಹಕಾರಿ ಎಂದು ಹೇಳಿದರು. ಬಿಇಒ ಬಿ.ಗೋವಿಂದಪ್ಪ, ತಾಲೂಕು ದೈಹಿಕ ಪರಿವೀಕ್ಷಕ ಎಂ.ಪ್ರಕಾಶ್, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ವಿ.ರವಿ, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ನಿರ್ದೇಶಕ ಎಂ.ಬಿ.ರಾಮಚಂದ್ರಪ್ಪ, ಮಾಜಿ ಅಧ್ಯಕ್ಷ ಎಚ್.ಬಿ.ನಾಗರಾಜಪ್ಪ ಮತ್ತಿತರರಿದ್ದರು.