ಕಪ್ಪಸೋಗೆ: ಹುಲ್ಲಹಳ್ಳಿ ಸಮೀಪದ ಮಹಾದೇವ ತಾತಾ ಐಕ್ಯಸ್ಥಳ ಸಂಗಮ ಕ್ಷೇತ್ರದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಶ್ರೀ ಸದ್ಗುರು ಮಹಾದೇವ ತಾತಾ ಅವರ ಪ್ರಾಥಮಿಕ ಶಾಲಾ ಕಟ್ಟಡವನ್ನು ಜೂನ್ 9ರಂದು ಮಧ್ಯಾಹ್ನ 2 ಗಂಟೆಗೆ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಸಮ್ಮುಖದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಉದ್ಘಾಟಿಸಲಿದ್ದಾರೆ.
ದೇವನೂರು ಗುರುಮಲ್ಲೇಶ್ವರ ತ್ರಿವಿಧ ದಾಸೋಹ ಮಠಾಧ್ಯಕ್ಷ ಶ್ರೀ ಮಹಾಂತ ಸ್ವಾಮೀಜಿ, ಗುರು ಕಂಬಳೇಶ್ವರ ಮಠದ ಶ್ರೀ ಮಲ್ಲನಮೂಲೆ ಚನ್ನಬಸವ ಸ್ವಾಮೀಜಿ. ಮಾದನಹಳ್ಳಿ ಉಕ್ಕಿನ ಕಂತೆ ಮಠದ ಶ್ರೀ ಸಾಂಬ ಸದಾಶಿವ ಸ್ವಾಮೀಜಿ, ಸಾಲೂರು ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಅವರು ಕಾರ್ಯಕ್ರಮದ ಸಾನ್ನಿಧ್ಯ ವಹಿಸಲಿದ್ದು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಡಾ.ಶಾಮನೂರ ಶಿವಶಂಕರಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಶ್ರೀ ಮಹದೇವ ತಾತಾ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವರು. ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರು ಶಾಲಾ ಕಟ್ಟಡ ನಿರ್ಮಾಣಕ್ಕೆ ಭೂಮಿ ನೀಡಿದ ಮಹದೇವಮ್ಮ ಅವರ ಕುಟುಂಬ ಹಾಗೂ ಕಟ್ಟಡ ನಿರ್ಮಾಣಕ್ಕೆ ಸಹಕಾರ ನೀಡಿದ ದಾನಿಗಳನ್ನು ಗೌರವಿಸಲಿದ್ದಾರೆ. ಶಾಸಕರಾದ ಜಿ.ಟಿ.ದೇವೇಗೌಡ, ದರ್ಶನ್ ಧ್ರುವನಾರಾಯಣ್, ಅನಿಲ್ ಚಿಕ್ಕಮಾದು. ಗಣೇಶ್ ಪ್ರಸಾದ್, ಸಂಸದ ಸುನಿಲ್ ಬೋಸ್, ಮಾಜಿ ಶಾಸಕರಾದ ಬಿ.ಹರ್ಷವರ್ಧನ್, ಕಳಲೆ ಕೇಶವಮೂರ್ತಿ ಸೇರಿದಂತೆ ಇನ್ನೂ ಅನೇಕ ಮಹನೀಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸದ್ಗುರು ಮಹಾದೇವ ತಾತಾ ಅವರ ಭಕ್ತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.