ಕೇರಳ: ಹುಟ್ಟಿದ ಕೆಲವೇ ಘಂಟೆಗಳಲ್ಲಿ ಹಸುಳೆಯ ಕತ್ತು ಹಿಸುಕಿ ಕೊಲೆ ಮಾಡಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಕೇರಳದ ಇಡುಕ್ಕಿಯ ಕಮಬಮ್ಮೆಟ್ಟು ಎಸ್ಟೇಟ್ನಲ್ಲಿ ಈ ಘಟನೆ ನಡೆದಿದ್ದು, ಮಧ್ಯಪ್ರದೇಶದ ಇಂದೋರ್ ಮೂಲದ ಸಧುರಾಮ್ ಹಾಗೂ ಮಾಲತಿ ಎಂಬ ಜೋಡಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೆಲಸಕ್ಕೆಂದು ಬಂದಿದ್ದ ಇವರು ವಿವಾಹಿತ ದಂಪತಿಗಳ ಸೋಗಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ತಮ್ಮ ಮಗು ಹುಟ್ಟುವಾಗಲೇ ಸತ್ತು ಹೋಗಿದೆ ಎಂದು ಮನೆಯ ಮಾಲೀಕ ಹಾಗೂ ಸುತ್ತಲಿನ ಜನರನ್ನು ನಂಬಿಸಿದ್ದರು. ಆದರೆ, ಮಗುವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಯನ್ನು ನಡೆಸಿದಾಗ ಮಗುವಿನ ಕತ್ತು ಹಿಸುಕಿ ಕೊಂದಿರುವ ಘಟನೆ ಬೆಳಕಿಗೆ ಬಂದಿದೆ.
ಪೊಲೀಸ್ ವಿಚಾರಣೆ ವೇಳೆ ಸಧುರಾಮ್ ತಪ್ಪೊಪ್ಪಿಕೊಂಡಿದ್ದು, ಪೊಲೀಸರ ನಿಗಾದಲ್ಲಿ ಮಹಿಳೆಯು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಆರೋಪಿಗಳ ವಿರುದ್ಧ ಕೊಲೆ ಸೇರಿದಂತೆ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ.(ಏಜೆನ್ಸೀಸ್)