ವಿಜಯವಾಡ: ಮದುವೆಯಾದ ಒಂದೇ ತಿಂಗಳಲ್ಲಿ ನವವಿವಾಹಿತೆಯೊಬ್ಬಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಚಿತ್ತೂರ್ ಜಿಲ್ಲೆಯ ಕುಪ್ಪಮ್ ವಲಯದ ಕುರ್ಮೈಪುರಂನಲ್ಲಿ ನಡೆದಿದೆ.
ಚೈತನ್ಯ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಕಳೆದ ತಿಂಗಳು 28ರಂದು ತಂಗವೇಲು ಎಂಬಾತನ ಜತೆ ಮದುವೆಯಾಗಿತ್ತು. ಕೇವಲ ಒಂದೇ ತಿಂಗಳಲ್ಲಿ ಆತ್ಮಹತ್ಯೆ ಶರಣಾಗಿರುವು ಪಾಲಕರ ಆಕ್ರಂದನ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ.
ಆತ್ಮಹತ್ಯೆಗೆ ಗಂಡನ ಮನೆಯವರ ಕಿರುಕುಳವೇ ಕಾರಣ ಎಂದು ತಿಳಿದುಬಂದಿದೆ. ಹೀಗಾಗಿ ಗಂಡನ ಮನೆಯ ಮೇಲೆ ಚೈತ್ಯನ್ಯ ಪಾಲಕರು ಮತ್ತು ಸಂಬಂಧಿಕರು ದಾಳಿ ಮಾಡಿ, ಬೆಂಕಿ ಇಟ್ಟಿದ್ದಾರೆ. ಅಲ್ಲದೆ, ಅನೇಕ ಪದಾರ್ಥಗಳನ್ನು ಧ್ವಂಸ ಮಾಡಿದ್ದಾರೆ.
ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಮಾಹಿತಿ ತಿಳಿದ ಪೊಲೀಸರು ತಕ್ಷಣ ಸ್ಥಳಕ್ಕೆ ಆಗಮಿಸಿ ತಿಳಿಗೊಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ. (ಏಜೆನ್ಸೀಸ್)