ನ್ಯೂಸ್

ರಾಜ್ಯದಲ್ಲಿ ಮೂರು ದಿನ ಮಳೆ; ವಾಯುಭಾರ ಕುಸಿತ ಪರಿಣಾಮ

vijayavani

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಮುಂದಿನ 72 ಗಂಟೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡುಗು, ಮಂಡ್ಯ, ಮೈಸೂರು, ರಾಮನಗರ ಹಾಗೂ ತುಮಕೂರಿನಲ್ಲಿ ಡಿ.17ರಿಂದ ಡಿ.19 ರವರೆಗೆ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.