ಮಣಿಪುರ ರಾಜ್ಯದಲ್ಲಿ ಎನ್‌ಎಚ್‌ಎಂ ಒಳ ಗುತ್ತಿಗೆ ನೌಕರರನ್ನು ಖಾಯಂಗೊಳಿಸಿರುವಂತೆ ಕರ್ನಾಟಕದಲ್ಲಿಯೂ ಸಹ ಎನ್‌ಎಚ್‌ಎಂ ನೌಕರರನ್ನು ಖಾಯಂ ಮಾಡುವಂತೆ ಈಗಾಗಲೇ ಸಾಕಷ್ಟು ಹೋರಾಟಗಳನ್ನು ನಡೆಸಿದ್ದು, ಸಚಿವ ಸಂಪುಟದಲ್ಲಿ ಅನುಮೊದನೆ ಪಡೆಯಲು ವಿಳಂಬವಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎನ್‌ಎಚ್‌ಎಂ ನೌಕರರ ಸಂಘ ಬೇಸರ ವ್ಯಕ್ತಪಡಿಸಿದೆ.
ಕಳೆದ 2023 ರಲ್ಲಿ 28000 ಎನ್‌ಎಚ್‌ಎಂ ಗುತ್ತಿಗೆ ನೌಕರರನ್ನು ಖಾಯಂ ಮಾಡುವಂತೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮುಷ್ಕರ ನಡೆಸಿದ್ದೇವು. ಅಂದು ಮುಷ್ಕರದ ವೇದಿಕೆಗೆ ಆಗಮಿಸಿದ್ದ ಡಿ ಕೆ ಶಿವಕುಮಾರ್ ಹಾಗೂ ದಿನೇಶ್ ಗುಂಡೂರಾವ್ ಅವರು ಕೊರೋನ ಸಮಯದಲ್ಲಿ ಆರೋಗ್ಯ ಇಲಾಖೆಯ ಸೇವೆಯನ್ನು ಪರಿಗಣಿಸಿ ನಮ್ಮ ಎನ್‌ಎಚ್‌ಎಂ ನೌಕರರನ್ನು ಖಾಯಂ ಮಾಡುವುದಾಗಿ ಭರವಸೆ ನೀಡಿದ್ದರು. ಸದ್ಯ ಮಾನ್ಯ ಮುಖ್ಯಮಂತ್ರಿಗಳು ಸೂಕ್ತ ಕ್ರಮ ವಹಿಸಲು ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಸೂಚಿಸಿರುತ್ತಾರೆ ಎಂದು ಸಂಘದ ರಾಜ್ಯಾಧ್ಯಕ್ಷ ಅಶ್ವತ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮುಖ್ಯಮಂತ್ರಿಗಳ ನಿರ್ದೇಶನದಂತೆ ಎನ್‌ಎಚ್‌ಎಂ ಒಳ ಗುತ್ತಿಗೆ ನೌಕರರ ಖಾಯಂ ಕಡತವು ತಯಾರಾಗಿದ್ದು ಸಚಿವ ಸಂಪುಟದಲ್ಲಿ ಅನುಮೋದನೆ ನೀಡುವಲ್ಲಿ ವಿಳಂಬವಾಗುತ್ತಿದೆ. ಇದರಿಂದ ನಮ್ಮ ನೌಕರರು ವಿಚಾಲಿತರಾಗಿದ್ದಾರೆ.ಸದ್ಯ ಚುನಾವಣಾ ಪೂರ್ವದಲ್ಲಿ ಪುಣಾಳಿಕೆಯಲ್ಲಿ ಪ್ರಕಟಿಸಿದ 5 ಪ್ರಮುಖ ಭರವಸೆಗಳನ್ನು ಕಾಂಗ್ರೆಸ್ ಸರ್ಕಾರ ಈಗಾಗಲೇ ಯಶಸ್ವಿಯಾಗಿ ಈಡೇರಿಸಿದೆ. ಕೂಡಲೇ ಸಚಿವ ಸಂಪುಟದಲ್ಲಿ ಅನುಮೋದನೆ ಪಡೆದರೆ ನೌಕರರ ಸತತ ಹೋರಾಟಕ್ಕೆ ಲ ದೊರೆತಂತಾಗುತ್ತದೆ ಎಂದು ಹೇಳಿದರು.
2023ರಲ್ಲಿ ಅಂದಿನ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸದ ಕಾರಣ ಇಂದು ಪ್ರತಿ ಪಕ್ಷ ಸ್ಥಾನದಲ್ಲಿ ಕುಳಿತಿದೆ. ಈಗ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆದಿದ್ದು, ಸನ್ಮಾನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರವರ ನೇತೃತ್ವದಲ್ಲಿ ಅಧಿಕಾರ ನಡೆಸುತ್ತಿದ್ದಾರೆ. ಈಗಾಗಲೇ ಅಂಗನವಾಡಿ ಕಾರ್ಯಕರ್ತೆಯರಿಗೆ ನಿವೃತ್ತಿ ಸಮಯದಲ್ಲಿ ಇಡಿಘಂಟು ಯೋಜನೆ ಜಾರಿ ಮಾಡಿದ್ದಾರೆ. ಆಶಾ ಕಾರ್ಯಕರ್ತೆಯರಿಗೆ ಗೌರವ ಧನ ಹೆಚ್ಚಿಸಿದ್ದು, ಇತ್ತೀಚೆಗೆ ರಾಜ್ಯ ಸರ್ಕಾರಿ ನೌಕರರ 7ನೇ ವೇತನ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿ ಮಾಡಿರುತ್ತಾರೆ.ಎಲ್ಲ ಬೇಡಿಕೆಗಳಿಗೆ ಸ್ಪಂದಿಸಿ ಜನಮನ್ನಣೆ ಪಡೆದಿರುವ ಸರ್ಕಾರವು ನುಡಿದಂತೆ ನಡೆಯುತ್ತಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ಸರ್ಕಾರಿ ನೌಕರರಿಗೆ ಸಮನಾಗಿ ಯಾವುದೇ ಸೌಲಭ್ಯಗಳನ್ನು ಎನ್‌ಎಚ್‌ಎಂ ನೌಕರರು ಪಡೆಯದೇ ಅತ್ಯಂತ ಕಡಿಮೆ ಸಂಚಿತ ವೇತನ ಪಡೆದು ಸಾರ್ವಜನಿಕ ಆರೋಗ್ಯ ಸೇವೆಯಲ್ಲಿ ಅನೇಕ ವರ್ಷಗಳಳಿಂದ ಸೇವೆ ನೀಡುತ್ತಾ ಬಂದಿರುತ್ತೇವೆ. ಸಾಮಾಜಿಕ ನ್ಯಾಯದ ಬಗ್ಗೆ, ಅಪಾರ ಕಾಳಜಿ ಹೊಂದಿರುವ ಮುಖ್ಯ ಮಂತ್ರಿಗಳು ಆಗಸ್ಟ್ 15ರೊಳಗೆ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಸಿದರು.