ನ್ಯೂಸ್

ಗೋವಾ ಸಿಎಂ ಭೇಟಿ ಮಾಡಿದ ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಗೋವಾ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಬಿಜೆಪಿ ಪಕ್ಷದ ಹಿರಿಯ ನಾಯಕ ಪ್ರಮೋದ್ ಸಾವಂತ್ ಅವರನ್ನು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪಣಜಿಯಲ್ಲಿ ಭೇಟಿ ಮಾಡಿದರು.

ಬಿಜೆಪಿ - ಜೆಡಿಎಸ್ ಮೈತ್ರಿ ಮತ್ತು ಮುಂಬರುವ ಲೋಕಸಭೆ ಚುನಾವಣೆ ಸಿದ್ಧತೆಗಳ ಬಗ್ಗೆ ಮಹತ್ವದ ಸಮಾಲೋಚನೆ ನಡೆಸಿದರು.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸೂಚನೆ ಮೇರೆಗೆ ಕ್ಷೇತ್ರ ಹಂಚಿಕೆ ಬಗ್ಗೆ ಮಾತುಕತೆ ನಡೆಸಿದರು ಎಂದು ತಿಳಿದು ಬಂದಿದೆ. ಕ್ಷೇತ್ರ ಹಂಚಿಕೆ ಬಗ್ಗೆ ನಿಖಿಲ್ ಕುಮಾರಸ್ವಾಮಿ ಬಿಜೆಪಿ ದೆಹಲಿ ನಾಯಕರ ಜತೆ ನಿರಂತರ ಸಂಪರ್ಕದಲ್ಲಿದ್ದಾರೆ.