ನ್ಯೂಸ್

ರೇಣುಕಾಸ್ವಾಮಿ ಹತ್ಯೆ ಕೇಸ್​; ನಿಖಿಲ್​ ಕುಮಾರಸ್ವಾಮಿ ಹೇಳಿದ್ದಿಷ್ಟು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ ಸೇರಿದಂತೆ 13 ಮಂದಿಯನ್ನು ಬಂಧಿಸಿ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಇತ್ತ ವಿಚಾರಣೆ ತೀವ್ರಗೊಳ್ಳುತ್ತಿದ್ದಂತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ವಿಚಾರಗಳು ಬೆಳಕಿಗೆ ಬರುತ್ತಿದ್ದು, ಈ ಸಂಬಂಧ ಜೆಡಿಎಸ್​ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್​ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಈ ಕುರಿತು ಮಾತನಾಡಿದ ನಿಖಿಲ್​, ಘಟನೆ ಸಂಬಂಧ ನಾನು ಮಾತನಾಡಲು ಹೋಗುವುದಿಲ್ಲ, ಈಗಾಗಲೇ ತನಿಖೆ ಶುರುವಾಗಿದೆ. ವರದಿ ಬಂದ ಮೇಲೆ ಪ್ರತಿಕ್ರಿಯಿಸುತ್ತೇನೆ ಎಂದು ಹೇಳಿದ್ದಾರೆ.

ಸಾರ್ವಜನಿಕ ಜೀವನದಲ್ಲಿ ಇರುವವರು ಯಾರೇ ಆಗಬಹುದು, ನಮ್ಮ ನಡೆಯನ್ನ ಜನರು ಗಮನಿಸುತ್ತಿರುತ್ತಾರೆ. ಹಾಗಾಗಿ ಒಂದು ಹೆಜ್ಜೆ ಇಡುವಾಗಲೂ ಸೂಕ್ಷ್ಮವಾಗಿ ಇಡಬೇಕಾಗುತ್ತದೆ. ನಾವು ಸಾರ್ವಜನಿಕ ಬದುಕಿನಲ್ಲಿ ಇರುವಾಗ ತೆರೆದ ಪುಸ್ತಕದಂತೆ, ಹಾಗಾಗಿ ಇನ್ನೊಬ್ಬರಿಗೆ ಆದರ್ಶವಾಗಿ ಬದುಕಬೇಕು. ಘಟನೆ ಸಂಬಂಧ ನಾನು ಮಾತನಾಡಲು ಹೋಗುವುದಿಲ್ಲ, ಈಗಘಾಲೇ ತನಿಖೆ ಶುರುವಾಗಿದೆ. ವದರಿ ಬಂದ ನಂತರ ಪ್ರತಿಕ್ರಿಯಿಸುತ್ತೇನೆ ಎಂದು ನಟ, ರಾಜಕಾರಣಿ ನಿಖಿಲ್​ ಕುಮಾರಸ್ವಾಮಿ ಹೇಳಿದ್ದಾರೆ.