ಲಡಾಖ್: ಸೇನಾ ವಾಹನವೊಂದು ಕಂದಕಕ್ಕೆ ಉರುಳಿ ಭೀಕರ ಅಪಘಾತ ಸಂಭವಿಸಿದ್ದು, 9 ಮಂದಿ ಸೈನಿಕರು ಸಾವಿಗೀಡಾಗಿದ್ದಾರೆ. ಇಂದು ಲಡಾಖ್ನಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.
ಬೆಂಗಾವಲು ಪಡೆ ವಾಹನಗಳು ಲೇಹ್ನಿಂದ ಕಿಯಾರಿಗೆ ಸಾಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಒಂದು ವಾಹನ ಇದ್ದಕ್ಕಿದ್ದಂತೆ ಕಂದಕಕ್ಕೆ ಉರುಳಿದೆ. ಪರಿಣಾಮವಾಗಿ 9 ಮಂದಿ ಸಾವಿಗೀಡಾಗಿದ್ದು, ಒಬ್ಬರು ಗಾಯಗೊಂಡಿದ್ದಾರೆ ಎಂದು ಡಿಫೆನ್ಸ್ ಪಿಆರ್ಒ ತಿಳಿಸಿದ್ದಾರೆ.
ಇದರಲ್ಲಿ ಇನ್ನಷ್ಟು ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಈ ಅಪಘಾತಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. -ಏಜೆನ್ಸೀಸ್