ನ್ಯೂಸ್

ರಾಜ್ಯಾದ್ಯಂತ ವ್ಯಾಪಕ ಮಳೆ; ಸಿಡಿಲು ಬಡಿದು ಒಂಬತ್ತು ಮಂದಿ ಸಾವು

ಪಟ್ಬಾ: ಬಿಸಿಲಿನ ಆರ್ಭಟಕ್ಕೆ ತತ್ತರಿಸಿದ ಬಿಹಾರಕ್ಕೆ ಇದೀಗ ವರುಣ ದೇವ ಕೃಪೆ ತೋರಿದ್ದು, ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದೆ. ಇದರ ನಡುವೆಯೇ ಕಳೆದ 24 ಗಂಟೆಗಳ ಅವಧಿಯಲ್ಲಿ ಸಿಡಿಲು ಬಡಿದು ಒಂಬತ್ತು ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದು ಎಚ್ಚರಿಕೆಯಿಂದಿರುವಂತೆ ಜನರಿಗೆ ಸೂಚಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಕಚೇರಿಯ ಹಿರಿಯ ಅಧಿಕಾರಿಯೊಬ್ಬರು, ಜೆಹಾನಾಬಾದ್ ಜಿಲ್ಲೆಯಲ್ಲಿ ಮೂವರು, ಮಾಧೇಪುರ ಜಿಲ್ಲೆಯಲ್ಲಿ ಇಬ್ಬರು, ಪೂರ್ವ ಚಂಪಾರಣ್, ರೋಹ್ತಾಸ್, ಸರನ್ ಮತ್ತು ಸುಪೌಲ್ ಜಿಲ್ಲೆಗಳಲ್ಲಿ ತಲಾ ಒಬ್ಬರು ಸಿಡಿಲು ಬಡಿದು ಮೃತಪಟ್ಟಿದ್ದಾರೆ.

ಘಟನೆ ಸಂಬಂಧ ಮೃತರಿಗೆ ತಲಾ 4 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಲಾಗಿದ್ದು, ರಾಜ್ಯದಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ವಿಪತ್ತು ನಿರ್ವಹಣಾ ಪಡೆ ನೀಡಿರುವ ಸೂಚನೆಗಳನ್ನು ಪಾಲಿಸುವಂತೆ ಸಿಎಂ ಜನರಿಗೆ ಮನವಿ ಮಾಡಿರುವುದಾಗಿ ಕಚೇರಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.