ಭೋಪಾಲ್: ರೈಲ್ವೆ ನಿಲ್ದಾಣದಲ್ಲಿ ಪಾದಚಾರಿ ಮೇಲ್ಸೇತುವೆಯ ಕೆಲ ಭಾಗ ಕುಸಿದು ಬಿದ್ದಿರುವ ಘಟನೆ ಭೋಪಾಲ್ನ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಘಟನೆಯಲ್ಲಿ ಒಂಬತ್ತು ಜನರು ಗಾಯಾಳುಗಳಾಗಿರುವುದಾಗಿ ವರದಿಯಾಗಿದೆ.
ಇಂದು ಬೆಳಗ್ಗೆ 9 ಗಂಟೆಯ ಸಮಯಕ್ಕೆ ಭೋಪಾಲ್ ರೈಲ್ವೆ ನಿಲ್ದಾಣದ ಮೂರನೇ ಪ್ಲಾಟ್ಫಾರಂ ಸಮೀಪದ ಪಾದಚಾರಿ ಮೇಲ್ಸೇತುವೆಯ ಕೆಲ ಭಾಗ ಕುಸಿದು ಬಿದ್ದಿದೆ. ಆಕಸ್ಮಿಕವಾಗಿ ನಡೆದ ಘಟನೆಯಿಂದಾಗಿ ಮೇಲ್ಸೇತುವೆಯ ಬಳಿ ಇದ್ದ ಒಂಬತ್ತು ಜನರಿಗೆ ಗಂಭೀರ ಗಾಯಗಳಾಗಿವೆ. ಸಹ ಪ್ರಯಾಣಿಕರ ಸಹಾಯದೊಂದಿಗೆ ತಕ್ಷಣವೇ ಗಾಯಾಳುಗಳನ್ನು ಆ್ಯಂಬುಲೆನ್ಸ್ನಲ್ಲಿ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಈ ಕುರಿತಾಗಿ ಟ್ವೀಟ್ ಮಾಡಿರುವ ಮಧ್ಯ ಪ್ರದೇಶದ ಮುಖ್ಯಮಂತ್ರಿ ಕಮಲ್ ನಾಥ್, "ಭೋಪಾಲ್ನ ರೈಲ್ವೆ ನಿಲ್ದಾಣದಲ್ಲಿ, ಪಾದಚಾರಿ ಮೇಲ್ಸೇತುವೆಯ ಒಂದು ಭಾಗ ಕುಸಿದಿರುವುದು ಒಂದು ದುರಂತ. ಅಪಘಾತದಲ್ಲಿ ಕೆಲವರು ಗಾಯಗೊಂಡಿದ್ದಾರೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಸಂಬಂಧಪಟ್ಟ ಅಧಿಕಾರಿಗಳಿಗೆ ನೆರವು ನೀಡುವಂತೆ ನಿದೇರ್ಶಿಸಲಾಗಿದೆ" ಎಂದು ತಿಳಿಸಿದ್ದಾರೆ. (ಏಜೆನ್ಸೀಸ್)