ನವದೆಹಲಿ: ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ಕೌನ್ಸಿಲ್ನ 54 ನೇ ಸಭೆ ಸೆ. 9 ರಂದು ನಡೆಯಲಿದೆ. ಈ ಸಭೆಯಲ್ಲಿಯೇ ಜಿಎಸ್‌ಟಿ ತೆರಿಗೆ ದರಗಳು ಮತ್ತು ಸ್ಲ್ಯಾಬ್‌ಗಳನ್ನು ತರ್ಕಬದ್ಧಗೊಳಿಸುವ ಬಗ್ಗೆ ಚರ್ಚಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಜಿಎಸ್‌ಟಿ ಕೌನ್ಸಿಲ್ ಸಭೆಯ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಸಭೆಯಲ್ಲಿ ಐಷಾರಾಮಿ ಉತ್ಪನ್ನಗಳು ಮತ್ತು ಹಾನಿಕಾರಕ ಉತ್ಪನ್ನಗಳ ಮೇಲೆ ಪರಿಹಾರದ ಸೆಸ್ ವಿಧಿಸುವ ಬಗ್ಗೆಯೂ ಚರ್ಚಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಸುದ್ದಿಗಾರರಿಗೆ ತಿಳಿಸಿದರು.
ಜಿಎಸ್‌ಟಿ ದರಗಳನ್ನು ತರ್ಕಬದ್ಧಗೊಳಿಸುವ ಕುರಿತು ಬಿಹಾರ ಉಪ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ನೇತೃತ್ವದಲ್ಲಿ ಸಚಿವರ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯ ಮೊದಲ ಸಭೆಯೂ ಇತ್ತೀಚೆಗೆ ನಡೆದಿದೆ. ಆದರೆ, ತೆರಿಗೆ ಸ್ಲ್ಯಾಬ್‌ಗಳಲ್ಲಿ ಯಾವುದೇ ಬದಲಾವಣೆ ಮಾಡಬಾರದು ಎಂದು ಕೆಲವು ಸದಸ್ಯರು ಸೂಚಿಸಿದ್ದಾರೆ. ಈ ಕಾರಣಕ್ಕೆ ಈಗಿರುವ 5, 12, 18, 28 ತೆರಿಗೆ ಸ್ಲ್ಯಾಬ್‌ಗಳು ಮುಂದುವರಿಯುವ ಸಾಧ್ಯತೆ ಇದೆ. ಈ ಬಗ್ಗೆ ಹೆಚ್ಚಿನ ಚರ್ಚೆಯ ಅಗತ್ಯವಿದೆ ಎಂದು ಅವರು ಹೇಳಿದರು.