ಶಿವಮೊಗ್ಗ; ಸಾಗರ ತಾಲೂಕಿನ ಶರಾವತಿ ಹಿನ್ನೀರಿನಲ್ಲಿ ಅಂಬಾರಗೋಡ್ಲು-ಕಳಸವಳ್ಳಿ ನಡುವೆ ನಿರ್ಮಾಣವಾಗಿರವ ಸೇತುವೆಯನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ ಇಂದು (14) ಲೋಕಾರ್ಪಣೆಗೊಳಿಸಿದರು. ನಂತರ ಮಾತನಾಡಿದ ಸಚಿವ ನಿತಿನ್ ಗಡ್ಕರಿ, ಸೇತುವೆಗೆ ಸಿಗಂದೂರು ಚೌಡೇಶ್ವರಿ ದೇವಿ ಸೇತುವೆ ಎಂದು ನಾಮಕರಣ ಮಾಡಲಾಗಿದೆ ಎಂದು ಘೋಷಿಸಿದ್ದಾರೆ.
ಇದನ್ನೂ ಓದಿ: ಶಿಷ್ಟಾಚಾರ ಉಲ್ಲಂಘನೆ ಆರೋಪ; ಸಿಎಂಗೆ ನೀಡಿದ್ದ ಆಹ್ವಾನ ಪತ್ರದೊಂದಿಗೆ ನಿತಿನ್ ಗಡ್ಕರಿ ಪ್ರತಿಕ್ರಿಯೆ| sigandur-bridge
ಸಿಗಂದೂರು ಚೌಡೇಶ್ವರಿ ದೇವಿ ಸೇತುವೆ ನಿರ್ಮಾಣಕ್ಕೆ ನಾನೇ ಭೂಮಿಪೂಜೆ ಮಾಡಿದ್ದೆ. ಇದೀಗ ನಾನೇ ಉದ್ಘಾಟನೆ ಮಾಡಿದ್ದು ನನ್ನ ಸೌಭಾಗ್ಯ ಎಂದು ಹೇಳಿದರು. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನೂತನ ಹೆದ್ದಾರಿ ನಿರ್ಮಾಣ ಮಾಡಿದ್ದೇವೆ. ಬೆಂಗಳೂರು ಹಾಗೂ ಚೆನ್ನೈ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದೆ. ಶಿವಮೊಗ್ಗ ಹಾಗೂ ತುಮಕೂರು ಹೆದ್ದಾರಿ ಕಾಮಗಾರಿ ನಡೆಯುತ್ತಿದೆ. ಹುಬ್ಬಳ್ಳಿ-ಧಾರವಾಡ ಹೆದ್ದಾರಿ ಕಾಮಗಾರಿ ಶೀಘ್ರದಲ್ಲೇ ಪೂರ್ಣ ಆಗಲಿದೆ ಎಂದರು.
(ಏಜೆನ್ಸೀಸ್)
ಈ ಸೇತುವೆಗೆ ಹಲವು ಹೆಸರುಗಳು ಕೇಳಿ ಬಂದಿದ್ದವು. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೆಸರು ಇಡಬೇಕು ಎಂದು ಕೆಲವರು ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ ಇದೀಗ, ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ ನೂತನ ಐತಿಹಾಸಿಕ ಸೇತುವೆಗೆ ‘ಸಿಗಂದೂರು ಚೌಡೇಶ್ವರಿ’ ಎಂಬ ಹೆಸರನ್ನು ಇಡುವ ಬಗ್ಗೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಈ ಭಾಗದ ಜನರ ಬೇಡಿಕೆ ಮತ್ತು ಸಿಗಂದೂರು ಚೌಡೇಶ್ವರಿ ದೇವಿ ಆಶೀರ್ವಾದ ಎಲ್ಲರ ಮೇಲೆ ಇರಬೇಕು ಎಂಬ ಉದ್ದೇಶದಿಂದ ಈ ಸೇತುವೆಗೆ ಸಿಗಂದೂರು ಚೌಡೇಶ್ವರಿ ಹೆಸರಿಡಲು ಒತ್ತಾಯಿಸಿದ್ದರು.