Sonia Gandhi: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಭಾರತೀಯ ನಾಗರಿಕರಾಗುವ ಮೊದಲು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿದೆ ಎನ್ನುವ ವಿಷಯಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ದೆಹಲಿ ನ್ಯಾಯಾಲಯ ಗುರುವಾರ ವಜಾಗೊಳಿಸಿದೆ.
1983 ರ ಏಪ್ರಿಲ್ 30 ರಂದು ಮಾತ್ರ ಭಾರತೀಯ ಪೌರತ್ವವನ್ನು ಪಡೆದಿದ್ದರೂ, ಸೊನಿಯಾ ಹೆಸರು 1980 ರಲ್ಲಿಯೇ ದೆಹಲಿ ಮತದಾರರ ಪಟ್ಟಿಯಲ್ಲಿ ಸೇರಿಸಲಾಗಿದೆ ಎಂದು ಆರೋಪಿಸಿ ಸಲ್ಲಿಸಲಾದ ಅರ್ಜಿಯ ಮೇರೆಗೆ ರೌಸ್ ಅವೆನ್ಯೂ ನ್ಯಾಯಾಲಯವು ತನ್ನ ಆದೇಶವನ್ನು ಪ್ರಕಟಿಸಿದೆ.
ಈ ಪ್ರಕರಣದ ತನಿಖೆ ಕೈಗೊಳ್ಳುವಂತೆ ಪೊಲೀಸರಿಗೆ ನಿರ್ದೇಶನ ನೀಡಬೇಕು ಎಂದು ನ್ಯಾಯಾಲಯವನ್ನು ಒತ್ತಾಯಿಸಿ ವಕೀಲರು ದೂರು ದಾಖಲಿಸಿದ್ದಾರೆ . 1980 ರಲ್ಲಿ ಗಾಂಧಿಯವರ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಲಾಗಿತ್ತು ಮತ್ತು 1982 ರಲ್ಲಿ ಅದನ್ನು ಅಳಿಸಲಾಗಿದೆ ಎಂದು ದೂರುದಾರರು ಆರೋಪಿಸಿದ್ದಾರೆ. 2024 ರ ಲೋಕಸಭಾ ಚುನಾವಣೆಯಲ್ಲಿ ಮತದಾರರ ವಂಚನೆಯ ವಿರೋಧ ಪಕ್ಷದ ಹೇಳಿಕೆಗಳಿಗೆ ತಿರುಗೇಟು ನೀಡುವ ಮೂಲಕ, ಕಾಂಗ್ರೆಸ್ ಸಂಸದೆ ಸೋನಿಯಾ ಗಾಂಧಿ ಅವರು ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲು ಮತದಾರರ ಪಟ್ಟಿಯಲ್ಲಿ ಅವರ ಹೆಸರು ಕಾಣಿಸಿಕೊಂಡಿದೆ ಎಂದು ಬಿಜೆಪಿ ಆರೋಪಿಸಿದೆ .
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಾಜಿ ಕೇಂದ್ರ ಸಚಿವ ಮತ್ತು ಬಿಜೆಪಿ ಸಂಸದ ಅನುರಾಗ್ ಠಾಕೂರ್, ಇಟಲಿಯಲ್ಲಿ ಜನಿಸಿದ ಸೋನಿಯಾ ಗಾಂಧಿ ಅವರನ್ನು ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲು 1980 ರಲ್ಲಿ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಹೇಳಿದ್ದಾರೆ. 1950 ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಪ್ರಕಾರ, ಭಾರತದ ನಾಗರಿಕನಲ್ಲದ ವ್ಯಕ್ತಿಯು ಮತದಾರರ ಪಟ್ಟಿಯಲ್ಲಿ ನೋಂದಣಿಗೆ ಅರ್ಹನಲ್ಲ ಎಂದು ಕಾನೂನು ಹೇಳುತ್ತದೆ.
ನ್ಯಾಯಾಲಯವು ಎಫ್‌ಐಆರ್ ದಾಖಲಿಸುವಂತೆ ನಿರ್ದೇಶಿಸಲು ನಿರಾಕರಿಸಿ ದೂರನ್ನು ವಜಾಗೊಳಿಸಿದೆ.(ಏಜೆನ್ಸೀಸ್)