ಅಮಿತ್​ ಶಾ 
ನ್ಯೂಸ್

'ಪಾಕಿಸ್ತಾನದೊಂದಿಗೆ ಮಾತುಕತೆ ಇಲ್ಲ': ಅಮಿತ್ ಶಾ | amitshah

ರಾಜೌರಿ: ಭಯೋತ್ಪಾದನೆ ಕೊನೆಗೊಳ್ಳುವವರೆಗೂ ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸುವುದರಲ್ಲಿ ಅರ್ಥವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. amitshah

ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯ ಪ್ರಚಾರದ ಭಾಗವಾಗಿ ಭಾನುವಾರ ನೌಶೇರಾದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಅಮಿತ್ ಶಾ ಮಾತನಾಡಿದರು.

ಕಾಂಗ್ರೆಸ್ ಸೇರಿದಂತೆ ವಿವಿಧ ವಿರೋಧ ಪಕ್ಷಗಳು 370 ನೇ ವಿಧಿಯನ್ನು ಪುನಃಸ್ಥಾಪಿಸಲಾಗುವುದಿಲ್ಲ. ಪ್ರತಿಪಕ್ಷಗಳು ಭಯೋತ್ಪಾದಕರನ್ನು ಜೈಲಿನಿಂದ ಬಿಡುಗಡೆ ಮಾಡಲು ಬಯಸುತ್ತವೆ. ಆದರೆ ನಾವು ಯಾವುದೇ ಭಯೋತ್ಪಾದಕರು ಅಥವಾ ಕಲ್ಲು ತೂರಾಟಗಾರರನ್ನು ಜೈಲಿನಿಂದ ಬಿಡುಗಡೆ ಮಾಡುವುದಿಲ್ಲ ಎಂದು ಅಮಿತ್ ಶಾ ಹೇಳಿದರು.

ಭಯೋತ್ಪಾದಕರ ಬಿಡುಗಡೆ ಮಾಡಲ್ಲ:

ನಾವು ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸಬೇಕು ಎಂದು ಅವರು ಹೇಳುತ್ತಿದ್ದಾರೆ. ಆದರೆ ಭಯೋತ್ಪಾದನೆ ಕೊನೆಗೊಳ್ಳುವವರೆಗೂ ಮಾತುಕತೆ ಸಾಧ್ಯವಿಲ್ಲ ಎಂದು ನಾವು ಹೇಳುತ್ತೇವೆ. ಭಯೋತ್ಪಾದಕರನ್ನು ಜೈಲಿನಿಂದ ಬಿಡುಗಡೆ ಮಾಡಬೇಕೆಂದು ಅವರು ಬಯಸುತ್ತಾರೆ. ಒಬ್ಬ ಭಯೋತ್ಪಾದಕ ಅಥವಾ ಕಲ್ಲು ತೂರಾಟಗಾರನನ್ನು ಜೈಲಿನಿಂದ ಬಿಡುಗಡೆ ಮಾಡಲಾಗುವುದಿಲ್ಲ. ಇದಕ್ಕೆ ಬಿಜೆಪಿ ಗ್ಯಾರಂಟಿ’ ಎಂದು ಅಮಿತ್ ಶಾ ಹೇಳಿದರು. ಕಾಂಗ್ರೆಸ್, ಎನ್‌ಸಿ ಮತ್ತು ಪಿಡಿಪಿ ಕಳೆದ 70 ವರ್ಷಗಳಿಂದ ಗುಡ್ಡಗಾಡು ಪ್ರದೇಶದಲ್ಲಿ ವಾಸಿಸುವ ಜನರಿಗೆ ಮೀಸಲಾತಿ ಹಕ್ಕನ್ನು ನಿರಾಕರಿಸಿವೆ, ಆದರೆ ಗುಡ್ಡಗಾಡು ಪ್ರದೇಶದ ಜನರಿಗೆ ಮೀಸಲಾತಿ ನೀಡಲು ಮೋದಿ ಸಂಕಲ್ಪ ಮಾಡಿದ್ದಾರೆ ಎಂದು ಹೇಳಿದರು.

ಜಮ್ಮು ಮತ್ತು ಕಾಶ್ಮೀರದಲ್ಲಿ ಸೆಪ್ಟೆಂಬರ್ 18ರಂದು ಮೊದಲ ಹಂತದ ಮತದಾನ ನಡೆದಿದ್ದು, ಶೇ.61.13ರಷ್ಟು ಮತದಾನವಾಗಿದೆ. ಎರಡನೇ ಹಂತದ ಮತದಾನ ಇದೇ ತಿಂಗಳ 25ರಂದು ನಡೆಯಲಿದ್ದು, ಮೂರನೇ ಹಂತದ ಮತದಾನ ಅಕ್ಟೋಬರ್ 5ರಂದು ನಡೆಯಲಿದೆ.