ಬೆಂಗಳೂರು: (No rain) ಸೈಕ್ಲೋನ್ ಪರಿಣಾಮ ಕೆಲ ದಿನಗಳಿಂದ ರಾಜ್ಯದ ಹಲವೆಡೆ ಸುರಿಯುತ್ತಿದ್ದ ಮಳೆ ಈಗಾಗಲೇ ಕ್ಷೀಣವಾಗಿದೆ. ಈ ಹಿನ್ನೆಲೆಯಲ್ಲಿ ದೀಪಾವಳಿಯಲ್ಲಿ ಮಳೆ ಸುರಿಯುವ ಮುನ್ಸೂಚನೆ ಇಲ್ಲ ಎಂದು ರಾಜ್ಯ ಹವಾಮಾನ ಇಲಾಖೆ ಹೇಳಿದೆ.
ಬೆಂಗಳೂರು ನಗರ ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ಭಾನುವಾರ ಮೋಡ ಕವಿದ ವಾತಾವರಣ ಇತ್ತು. ಕೆಲವು ಪ್ರದೇಶಗಳಲ್ಲಿ ತುಂತುರು ಮಳೆಯಾಯಿತು. ಆದರೆ, ಬಹುತೇಕ ಜಿಲ್ಲೆಗಳಲ್ಲಿರುವ ಒಣ ಹವೆ ಇತ್ತು. ಇದು ವಾರಪೂರ್ತಿ ಮುಂದುವರಿಯಲಿದೆ.
ದಕ್ಷಿಣ ಕರ್ನಾಟಕ, ಉತ್ತರ ಕರ್ನಾಟಕದಲ್ಲಿ ರಾತ್ರಿ ಮತ್ತು ಮುಂಜಾನೆ ಚಳಿ ಅನಭವವಾಗುತ್ತಿದೆ. ರಾಜ್ಯದ ಕೆಲ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನದಲ್ಲಿ ಉಷ್ಣಾಂಶ ಹೆಚ್ಚಳವಾದರೆ, ಇನ್ನೂ ಕೆಲವು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಉಷ್ಣಾಂಶ ಇಳಿಮುಖವಾಗಿದೆ. ಹಲವು ಜಿಲ್ಲೆಗಳಲ್ಲಿ ಮುಂಜಾನೆ ಮಂಜಿನ ವಾತಾವರಣ ಮುಂದುವರಿದಿದೆ ಎಂದು ಇಲಾಖೆ ಮಾಹಿತಿ ಕೊಟ್ಟಿದೆ.