ನ್ಯೂಸ್

ಅಕ್ರಮ ಹಣ ವರ್ಗಾವಣೆ ಪ್ರಕರಣ; ತಮ್ಮ ಬಂಧನ ಪ್ರಶ್ನಿಸಿ ಸಂಜಯ್ ಸಿಂಗ್ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಹೈಕೋರ್ಟ್

ನವದೆಹಲಿ: ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ (ED) ವಶದಲ್ಲಿರುವ ಎಎಪಿ ನಾಯಕ ಸಂಜಯ್​ ಸಿಂಗ್​ ಅವರಿಗೆ ದೆಹಲಿ ಹೈಕೋರ್ಟ್​ನಲ್ಲಿ ಹಿನ್ನಡೆಯಾಗಿದೆ.

ತಮ್ಮ ಬಂಧನವನ್ನು ಪ್ರಶ್ನಿಸಿ ಸಂಜಯ್​ ಸಿಂಗ್​ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಅರ್ಜಿ ವಿಚಾರಣೆ ನಡೆಸಿದ ಸ್ವರ್ಣಕಾಂತ ಶರ್ಮಾ ಅವರಿದ್ಧ ಏಕಸದಸ್ಯ ಪೀಠವು ಯಾವ ಆಧಾರದ ಮೇಲೆ ನಿಮಗೆ ಜಾಮೀನು ಮಂಜೂರು ಮಾಡಬೇಕು ಎಂದು ಪ್ರಶ್ನಿಸಿ ಅರ್ಜಿಯನ್ನು ವಜಾ ಮಾಡಿದ್ದಾರೆ.

ಅಬಕಾರಿ ನೀತಿಯಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ನಾಯಕ್​ ಸಂಜಯ್​ ಸಿಂಗ್​ರನ್ನು ಜಾರಿ ನಿರ್ದೇಶನಾಲಯ ಅಕ್ಟೋಬರ್ 4ರಂದು ವಶಕ್ಕೆ ಪಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮನ್ನು ಯಾವ ಕಾರಣಕ್ಕೆ ಬಂಧಿಸಲಾಗಿದೆ ಎಂದು ಪ್ರಶ್ನಿಸಿ ಸಂಜಯ್ ಸಿಂಗ್ ಕಳೆದ ವಾದ ದೆಹಲಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.

ದೆಹಲಿ ಸರ್ಕಾರ ಜಾರಿಗೆ ತಂದಿದ್ದ ಅಬಕಾರಿ ನೀತಿಯಲ್ಲಿ ವ್ಯಾಪಕ ಅಕ್ರಮ ನಡೆದಿದ್ದು, ಇದರಲ್ಲಿ ಸಂಜಯ್​ ಸಿಂಗ್ ಕೂಡ ಪ್ರಮುಖ ಪಾತ್ರ ವಹಿಸಿದ್ದಾರೆ. ಕೆಲವು ವ್ಯಾಪಾರಿಗಳು ಹಾಗೂ ಮದ್ಯ ತಯಾರಿಕರಿಂದ ಸಿಂಗ್​ ಕಮಿಷನ್ ಪಡೆದಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ ಎಂದು ತನಿಖಾ ಸಂಸ್ಥೆಗಳು ವಾದ ಮಂಡಿಸಿವೆ.