ನವದೆಹಲಿ: ತುಳು ಸೇರಿದಂತೆ ಭಾರತೀಯ ಭಾಷೆಗಳನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಲು ಯಾವುದೇ ನಿರ್ದಿಷ್ಟ ಮಾನದಂಡಗಳಿಲ್ಲ ಎಂದು ಕೇಂದ್ರ ಸಚಿವ ಕಿಶನ್ ರೆಡ್ಡಿ ತಿಳಿಸಿದ್ದಾರೆ.
ರಾಜ್ಯಸಭೆಯಲ್ಲಿ ಸಿಪಿಐ(ಎಂ) ಸದಸ್ಯ ಪಿ. ಸಂತೋಷ್ ಕುಮಾರ್ ಕೇಳಿದ ಪ್ರಶ್ನೆಗೆ ಕೇಂದ್ರ ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಕಿಶನ್ ರೆಡ್ಡಿ ಉತ್ತರಿಸುವ ವೇಳೆ ತಿಳಿಸಿದ್ದಾರೆ.
ತುಳು ಸೇರಿದಂತೆ ಭಾರತೀಯ ಭಾಷೆಗಳನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಬೇಕೆಂದು ಕಾಲಕಾಲಕ್ಕೆ ಬೇಡಿಕೆಗಳು ಬರುತ್ತಿವೆ. ಪಹ್ವಾ ಮತ್ತು ಸೀತಾಕಾಂತ್ ಮೊಹಾಪಾತ್ರ ಸಮಿತಿಗಳ ಮೂಲಕ ನಿರ್ದಿಷ್ಟ ಮಾನದಂಡಗಳನ್ನು ನಿಗದಿಪಡಿಸುವ ಪ್ರಯತ್ನಗಳು ನಡೆದಿವೆಯಾದರೂ ಪ್ರಯತ್ನಗಳೂ ಪೂರ್ಣಗೊಂಡಿಲ್ಲ.
ಉಪಭಾಷೆ ಮತ್ತು ಭಾಷೆಗಳ ವಿಕನಸವು ಕ್ರಿಯಾತ್ಮಕ ಪ್ರಕ್ರಿಯೆಯಾಗಿದ್ದು ಸಾಮಾಜಿಕ, ಸಾಂಸ್ಕೃತಿಕ, ಆರ್ಥಿಕ ಮತ್ತು ರಾಜಕೀಯ ಬೆಳವಣಿಗೆಯಿಂದ ಪ್ರಭಾವಿತವಾಗಿರುತ್ತವೆ. ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆಗೊಳ್ಳಲು ಭಾಷೆಗಳಿಗೆ ಯಾವುದೇ ನಿರ್ದಿಷ್ಯ ಮಾನದಂಡ ನಿಗದಿಪಡಿಸುವುದು ಕಷ್ಟಕರವಾಗಿದೆ.
ಜನರ ಬೇಡಿಕೆ ಹಾಗೂ ಭಾವನೆಗಳ ಕುರಿತು ಸರ್ಕಾರಕ್ಕೆ ಅರಿವಿದೆ. ಅಂತಹ ವಿನಂತಿಗಳನ್ನು ಭಾಷೆಗಳನ್ನು ಗಮನದಲ್ಲಿಟ್ಟುಕೊಂಡು ಕ್ರಮಕೈಗೊಳ್ಳಲಾಗುವುದು. ಮೈಸೂರಿನಲ್ಲಿರುವ ಭಾರತೀಯ ಭಾಷೆಗಳ ಕೇಂದ್ರಿಯಾ ಸಂಸ್ಥೆಯು ತುಳು ಸೇರಿದಂತೆ ಎಲ್ಲಾ ಭಾಷೆಗಳ ಪ್ರಚಾರಕ್ಕಾಗಿ ಕೆಲಸ ಮಾಡುತ್ತಿದೆ.
ಈ ಸಂಸ್ಥೆಗೆ 2020-21ರಲ್ಲಿ 54.88 ಕೋಟಿ ರೂ., 2021-22ರಲ್ಲಿ 57.88 ಕೋಟಿ ರೂ., 2022-23ರಲ್ಲಿ 60 ಕೋಟಿ ರೂಪಾಯಿಗಳ ಅನುದಾನವನ್ನು ನೀಡಲಾಗಿದೆ ಎಂದು ಕೇಂದ್ರ ಸಚಿವ ಕಿಶನ್ ರೆಡ್ಡಿ ರಾಜ್ಯಸಭೆಯಲ್ಲಿ ಸಿಪಿಐ(ಎಂ) ಸದಸ್ಯ ಪಿ. ಸಂತೋಷ್ ಕುಮಾರ್ ಪ್ರಶ್ನೆಗೆ ಉತ್ತರಿಸಿದ್ದಾರೆ.