ನ್ಯೂಸ್

ಬೆಂಗಳೂರು ನಡೆಯುತ್ತಿರುವುದೇ ನಮ್ಮಿಂದ! ಯುವತಿಯ ವಿಡಿಯೋ ವೈರಲ್​ ಆಗ್ತಿದ್ದಂತೆ ಆಕ್ರೋಶ

  ಬೆಂಗಳೂರು: ಬೆಂಗಳೂರಿನ ಸ್ಥಳೀಯರ ವಿರುದ್ಧ ಉತ್ತರ ಭಾರತದ ಯುವತಿಯೊಬ್ಬಳು ನಾಲಿಗೆ ಹರಿಬಿಟ್ಟಿದ್ದು, ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾಳೆ.  ಈ ಕುರಿತಾದ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

ನಿನ್ನೆಯಷ್ಟೇ ಓಲಾ ಆಟೋ ಬುಕ್ಕಿಂಗ್ ಸಂಬಂಧ ಆಟೋ ಚಾಲಕ ಮತ್ತು ಯುವತಿಯ ನಡುವೆ ವಾಗ್ವಾದ ಆಗಿತ್ತು. ಬಳಿಕ ಆಟೋ ಚಾಲಕನ ವಿರುದ್ಧ ಕ್ರಮಕ್ಕೆ ಸಾಮಾಜಿಕ ಜಾಲತಾಣದಲ್ಲಿ ಒತ್ತಾಯ ಕೂಡ ಮಾಡಲಾಗಿತ್ತು. ಅದರಂತೆ ಚಾಲಕನ ವಿರುದ್ಧ ಪೊಲೀಸರು ಕ್ರಮ ಕೂಡ ಕೈಗೊಂಡಿದ್ದರು.

ವಿಡಿಯೋದಲ್ಲಿ ಏನಿದೆ?: ‘ಬೇರೆ ಕಡೆಯಿಂದ ಬಂದು ಇಲ್ಲಿ ಕೆಲಸ ಮಾಡುತ್ತಿರುವ ನಮ್ಮಂಥವರಿಂದಲೇ ಇಡೀ ಬೆಂಗಳೂರು ಅಭಿವೃದ್ಧಿಯಾಗುತ್ತಿದೆ. ನಾವೆಲ್ಲಾ ತೆರಿಗೆ ಕಟ್ಟುತ್ತಿದ್ದೇವೆ. ಇವರಿಗೆ ನಾವು ಬಾಡಿಗೆ ಕಟ್ಟುತ್ತಿದ್ದೇವೆ. ಇಡೀ ಬೆಂಗಳೂರಿನ ಆರ್ಥಿಕತೆ ನಡೆಯುತ್ತಿರುವುದೇ ನಮ್ಮಿಂದ ಎಂದು ಯುವತಿ ವೀಡಿಯೋದಲ್ಲಿ ಹೇಳಿಕೊಂಡಿದ್ದಾಳೆ.

ಉತ್ತರ ಭಾರತೀಯ ಮೂಲದ ಯುವತಿ ಬೆಂಗಳೂರಿನ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಬೆಂಗಳೂರಿನಲ್ಲೇ ಇದ್ದುಕೊಂಡು ನಮ್ಮ ರಾಜ್ಯದ ಬಗ್ಗೆ ಮಾತಾಡಿದ್ದ ಯುವತಿ ಸದ್ಯ ವಿಡಿಯೋ ಡಿಲೀಟ್ ಮಾಡಿ ಯುವತಿ ಕ್ಷಮೆ ಕೇಳಲು ನೆಟ್ಟಿಗರು ಆಗ್ರಹಿಸಿದ್ದಾರೆ.  ಯುವತಿ ಮೇಲೆ ಕನ್ನಡಿಗರು ಆಕ್ರೋಶ ಹೊರ ಹಾಕಿದ್ದಾರೆ.