ನ್ಯೂಸ್

ನಾರ್ತ್ ವೆಸ್ಟರ್ನ್ ರೈಲ್ವೆಯಲ್ಲಿ ನೇಮಕಾತಿ; ಅರ್ಜಿ ಸಲ್ಲಿಸಲು ಫೆ.10 ಕೊನೇ ದಿನ

ಬೆಂಗಳೂರು: ಭಾರತೀಯ ರೈಲ್ವೆಯ 19 ವಲಯಗಳಲ್ಲಿ ಒಂದಾಗಿರುವ ನಾರ್ತ್ ವೆಸ್ಟರ್ನ್ ರೈಲ್ವೆ ವಲಯವು ರಾಜಸ್ಥಾನದ ಜೈಪುರದಲ್ಲಿ ಪ್ರಧಾನ ಕಚೇರಿ ಹೊಂದಿದೆ. ಪ್ರಸ್ತುತ ಈ ರೈಲ್ವೆ ವಲಯವು ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಫೆ.10ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಒಟ್ಟು ಹುದ್ದೆ: 1646

ಹುದ್ದೆಯ ಹೆಸರು
ಅಪ್ರೆಂಟಿಸ್‌ಶೀಪ್

ವಿದ್ಯಾರ್ಹತೆ
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಅಭ್ಯರ್ಥಿಯು ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ/ತತ್ಸಮಾನ ಪದವಿ, ನ್ಯಾಷನಲ್ ಕೌನ್ಸಿಲ್ ಫಾರ್ ವೊಕೇಶನಲ್ ಟ್ರೈನಿಂಗ್ (ಎನ್‌ಸಿವಿಟಿ)/ ಸ್ಟೇಟ್ ಕೌನ್ಸಿಲ್ ಫಾರ್ ವೊಕೇಶನಲ್ ಟ್ರೈನಿಂಗ್ (ಎಸ್‌ಸಿವಿಟಿ) ಹೊರಡಿಸಿದ ಅಧಿಸೂಚಿತ ಟ್ರೇಡ್‌ನಲ್ಲಿ ರಾಷ್ಟ್ರೀಯ ವ್ಯಾಪಾರ ಪ್ರಮಾಣಪತ್ರ ಹೊಂದಿರಬೇಕು.

ವಯೋಮಿತಿ, ವೇತನ
ಕನಿಷ್ಠ 15 ವರ್ಷ - ಗರಿಷ್ಠ 24 ವರ್ಷದೊಳಗಿರಬೇಕು (ಫೆ.10, 2024ಕ್ಕೆ ಅನ್ವಯ). ಗರಿಷ್ಠ ವಯೋಮಿತಿಯಲ್ಲಿ ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ,ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ 10 ವರ್ಷ ವಯೋಸಡಿಲಿಕೆ ನೀಡಲಾಗಿದೆ. ರೈಲ್ವೆ ಮಂಡಳಿಯು ಕಾಲಕಾಲಕ್ಕೆ ನೀಡಲಿರುವ ನಿಯಮಗಳು ಮತ್ತು ನಿರ್ದೇಶನಗಳ ಪ್ರಕಾರ ಸ್ಟೈಫಂಡ್‌ಗಳನ್ನು ನಿಗದಿಪಡಿಸಲಾಗಿದೆ.

ಆಯ್ಕೆ ಪ್ರಕ್ರಿಯೆ
ಹುದ್ದೆಗೆ ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ
ಎಸ್ಸಿ/ಎಸ್ಟಿ, ಪಿಡಬ್ಲ್ಯುಡಿ, ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಇತರ ಅಭ್ಯರ್ಥಿಗಳು 100ರೂ. ಶುಲ್ಕ ಪಾವತಿಸಬೇಕು.

ಅರ್ಜಿ ಸಲ್ಲಿಕೆ
ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಅಧಿಕೃತ www.rrcjaipur.in ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ
nwr.indianrailways.gov.in

ಅರ್ಜಿ ಸಲ್ಲಿಸಲು ಕೊನೇ ದಿನ: 10-02-2024