ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಬೀದಿ ನಾಯಿಗಳು. 
ನ್ಯೂಸ್

ಬೀದಿ ನಾಯಿಗಳಿಗೆ ವಿಶೇಷವಾಗಿ ತಯಾರಿಸಿದ ಆಹಾರ ನೀಡುತ್ತಿಲ್ಲ; ಬಿಬಿಎಂಪಿ| dogs

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೀದಿ ನಾಯಿಗಳಿಗೆ ನಾನ್‌ವೆಜ್ ಊಟ ನೀಡುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ನಿರ್ಧಾರವು ಭಾರೀ ಚರ್ಚೆಗೆ ಕಾರಣವಾಗುತ್ತಿದ್ದಂತೆ ಈ ವಿಚಾರವಾಗಿ ಬಿಬಿಎಂಪಿ ಕೊನೆಗೂ ಸ್ಪಷ್ಟನೆ ನೀಡಿದೆ.

ಬೀದಿನಾಯಿಗಳಿಗೆ ಚಿಕನ್ ರೈಸ್ ಭಾಗ್ಯದ ಕುರಿತು ಅನಿಮಲ್ ಹಸ್ಬೆಂಡ್ರಿ ಇನ್ಸ್ಟಾಗ್ರಾಂ ಖಾತೆಯಲ್ಲಿ ಬಿಬಿಎಂಪಿ ಈ ಪ್ರಕಟಣೆ ಹೊರಡಿಸಿದೆ. ಮಾನವ ಗುಣಮಟ್ಟದ ಆಹಾರವನ್ನು ಬೀದಿ ನಾಯಿಗಳಿಗೆ ನೀಡುವುದಿಲ್ಲ. ನಾಯಿ ದರ್ಜೆಯ ಆಹಾರ ಮಾತ್ರ ನೀಡಲಾಗುವುದು. ಟೆಂಡರ್‌ನಲ್ಲಿ ಊಟದ ಪದಾರ್ಥಗಳನ್ನು ನಮೂದಿಸಿದ್ದು ಬಿಟ್ಟರೇ ವಿತರಿಸುವ ಆಹಾರಕ್ಕೆ ಇನ್ನೂ ಹೆಸರಿಟ್ಟಿಲ್ಲ ಎಂದು ಬಿಬಿಎಂಪಿ ಹೇಳಿದೆ.

ಮಾನವ ಗುಣಮಟ್ಟದ ಆಹಾರವನ್ನು ಬೀದಿ ನಾಯಿಗಳಿಗೆ ನೀಡುವುದಿಲ್ಲ, ಬೀದಿ ನಾಯಿಗಳಿಗೆ ವಿಶೇಷವಾಗಿ ತಯಾರಿಸಿದ ಭಕ್ಷ್ಯನೀಡುತ್ತಿಲ್ಲ, ನಾಯಿ ದರ್ಜೆಯ ಆಹಾರ ನೀಡಲಾಗುವುದು ಎಂದು ಬಿಬಿಎಂಪಿ ಹೇಳಿದೆ. ವಿತರಿಸುವ ಆಹಾರಕ್ಕೆ ಯಾವುದೇ ಹೆಸರಿಟ್ಟಿಲ್ಲ ಎಂದು ಬಿಬಿಎಂಪಿ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿದೆ.

ಪ್ರಕಟಣೆಯಲ್ಲಿ ಬಿಬಿಎಂಪಿ ಹೇಳಿರೋದೇನು?

ಕೋಳಿ ಮಾಂಸದ ತ್ಯಾಜ್ಯವನ್ನು ಬಳಸಿ ಆಹಾರ ಸಿದ್ಧಪಡಿಸಿ ಬೀದಿ ನಾಯಿಗಳಿಗೆ ನೀಡಲಾಗುವುದು. ಅದಕ್ಕಾಗಿ ಕೋಳಿಯನ್ನು ಕೊಂದು ಹಾಕುವುದಿಲ್ಲ. ಟೆಂಡರ್‌ನಲ್ಲಿ ಬೀದಿ ನಾಯಿಗಳಿಗೆ ತಯಾರಿಸುವ ಆಹಾರದ ಪದಾರ್ಥಗಳಲ್ಲಿ ಚಿಕನ್ ರೈಸ್, ಚಿಕನ್ ಬಿರಿಯಾನಿ ಎಂದು ನಮೂದಿಸಿಲ್ಲ. ಸಸ್ಯಾಹಾರವನ್ನು ಬೀದಿ ನಾಯಿಗಳು ತಿನ್ನುವುದಿಲ್ಲ. ಹಾಗಾಗಿ, ಮಾಂಸಾಹಾರ ನೀಡಲಾಗುತ್ತಿದೆ.

(ಏಜೆನ್ಸೀಸ್)

ಅಗತ್ಯವಿರುವ ಕಡೆ ಮಾತ್ರ ಆಹಾರ ವಿತರಣೆ ಮಾಡಲಾಗುವುದು. ಪ್ರತಿ ಒಂದು ನಾಯಿಗೆ ದಿನದ ಆಹಾರಕ್ಕೆ 11 ರೂ. ವೆಚ್ಚ ಮಾಡಲಾಗುತ್ತಿದೆ. ಆಹಾರ ಸಾಗಾಣಿಕೆ ವೆಚ್ಚ, ಸ್ವಚ್ಛತೆ, ಜಿಎಸ್‌ಟಿ ಸೇರಿದಂತೆ ಒಟ್ಟು ವೆಚ್ಚ 22.42 ರೂ. ಆಗಲಿದೆ. ನಗರದ ಕೆಲವು ಕಡೆ ಬೀದಿ ನಾಯಿಗಳ ಹಿಡಿದು ಸಂತಾನಹರಣ ಶಸ್ತ್ರ ಚಿಕಿತ್ಸೆ, ಆ್ಯಂಟಿರೇಬಿಸ್ ಲಸಿಕೆಹಾಕುವುದು ಕಷ್ಟವಾಗಿದೆ. ಆಹಾರ ವಿತರಣೆಯಿಂದ ಆ ನಾಯಿಗಳನ್ನು ಹಿಡಿದು ಎಬಿಸಿ ಹಾಗೂ ಎಆರ್‌ವಿಗೆ ಸಹಕಾರಿಯಾಗಲಿದೆ ಎಂದು ತಿಳಿಸಲಾಗಿದೆ.