ನ್ಯೂಸ್

ಸಿಡಿಆರ್ ಪಡೆದ ಪ್ರಕರಣ ಐಶ್ವರ್ಯಾಗೌಡಗೆ ನೋಟಿಸ್ ಜಾರಿ

ಬೆಂಗಳೂರು: ಅಕ್ರಮವಾಗಿ ಕೆಲ ವ್ಯಕ್ತಿಗಳ ಮೊಬೈಲ್ ಕರೆಗಳ ವಿವರ (ಸಿಡಿಆರ್) ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಐಶ್ವರ್ಯಾ ಗೌಡಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದಾರೆ.

ಫೆ. ೧೩ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ವಿಜಯನಗರ ಉಪವಿಭಾಗದ ಎಸಿಪಿ ಚಂದನ್ ಅವರು ಐಶ್ವರ್ಯಾ ಗೌಡಗೆ ನೋಟಿಸ್ ನೀಡಿದ್ದಾರೆ. ಗುರುವಾರ ಬೆಳಗ್ಗೆ ೧೦.೩೦ ಕ್ಕೆ ವಿಜಯನಗರದ ಎಸಿಪಿ ಕಚೇರಿಯಲ್ಲಿ ತನಿಖಾಧಿಕಾರಿಯೂ ಆಗಿರುವ ಎಸಿಪಿ ಚಂದನ್ ಕುಮಾರ್ ಅವರ ಮುಂದೆ ಹಾಜರಾಗುವಂತೆ ನೋಟಿಸ್‌ನಲ್ಲಿ ಸೂಚಿಸಲಾಗಿದೆ.