ಬೆಂಕಿ ಬಸಣ್ಣ, ನ್ಯೂಯಾರ್ಕ್
ಬಾಂಗ್ಲಾ ವಿಮೋಚನಾ ಹೋರಾಟದಲ್ಲಿ ಭಾಗಿಯಾಗಿದ್ದ ಮಾಜಿ ಸೈನಿಕರ ಕುಟುಂಬಸ್ಥರಿಗೆ ಉದ್ಯೋಗ ಮೀಸಲಾತಿ ವಿರೋಧಿಸಿ ದೇಶಾದ್ಯಂತ ನಡೆದ ಪ್ರತಿಭಟನೆಯಲ್ಲಿ 300ಕ್ಕೂ ಅಧಿಕ ಮಂದಿ ಮರತಪಟ್ಟಿದ್ದು, ಅಲ್ಪಸಂಖ್ಯಾತ ಹಿಂದೂಗಳ ಮೇಲೆ ದೌರ್ಜನ್ಯ ಎಸಗಿ ಹತ್ಯೆ ಮಾಡಲಾಗಿದೆ. ಇದಲ್ಲದೆ ಹಿಂದೂ ದೇವಾಲಯಗಳನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ವಿಶ್ವದಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.
ಗಲಭೆ ಪೀಡಿತ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳು ಹಾಗೂ ದೇವಾಲಯಗಳ ಮೇಲೆ ನಡೆಯುತ್ತಿರುವ ದಾಳಿಯನ್ನು ಖಂಡಿಸಿ ಅಮೆರಿಕಾದ ರಾಜಧಾನಿ ನ್ಯೂಯಾರ್ಕ್ನ ಆಲ್ಬನಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ಪ್ರತಿಭಟನೆಯಲ್ಲಿ ಭಾರತ ಮತ್ತು ಬಾಂಗ್ಲಾದೇಶ ಮೂಲದ ಹಿಂದೂಗಳು ಭಾಗವಹಿಸಿದ್ದರು.
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ಘೋಷಣೆ ಕೂಗಿದ ಪ್ರತಿಭಟನಾನಿರತರು ಜನಪ್ರತಿನಿಧಿಗಳಿಗೆ, ಸೆನೆಟರ್ ಮೇಯರ್, ರಾಜಕಾರಣಿಗಳಿಗೆ ಅಮೆರಿಕ ಸರಕಾರದಿಂದ ಬಾಂಗ್ಲಾದೇಶದಲ್ಲಿರುವ ಅಲ್ಪಸಂಖ್ಯಾತ ಹಿಂದುಗಳಿಗೆ ರಕ್ಷಣೆ ಕೊಡುವಂತೆ ಒತ್ತಡ ಹೇರುವಂತೆ ಆಗ್ರಹಿಸಲಾಯಿತು. ಈ ಸಂದರ್ಭದಲ್ಲಿ ISKCON ಭವ್ಯವಾದ ಜಗನ್ನಾಥ ರಥಯಾತ್ರೆಯನ್ನು ಸಹ ಆಯೋಜಿಸಲಾಗಿತ್ತು.