ನ್ಯೂಸ್

ಎನ್​ಎಸ್​ಎಸ್​ನಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳಿ; ರವಿ ಕುಂಬಾರ

Haveri - Kariyappa Aralikatti

ರಾಣೆಬೆನ್ನೂರ: ವಿದ್ಯಾಥಿರ್ಗಳು ಎನ್​ಎಸ್​ಎಸ್​ ಕಾರ್ಯಚಟುವಟಿಕೆಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ಉಪನ್ಯಾಸಕ ರವಿ ಕುಂಬಾರ ಹೇಳಿದರು.
ನಗರದ ಕೆಎಲ್​ಇ ಸಂಸ್ಥೆಯ ರಾಜ-ರಾಜೇಶ್ವರಿ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯದಲ್ಲಿ ಸೋಮವಾರ ಏರ್ಪಡಿಸಿದ್ದ ಎನ್​ಎಸ್​ಎಸ್​ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಾಚಾರ್ಯ ನಾರಾಯಣ ನಾಯಕ ಎ. ಅಧ್ಯಕ್ಷತೆ ವಹಿಸಿದ್ದರು.
ಉಪನ್ಯಾಸಕರಾದ ವೀರೇಶ ಕುರಹಟ್ಟಿ, ರಾಜೇಶ್ವರಿ ದುಂಡಸಿ, ಭೀಮಾರತಿ ತೀರ್ಥ, ಡಾ. ಕವಿತಾ ಗಡ್ಡದಗೂಳಿ, ರತ್ನವ್ವ ಹಾದಿಮನಿ, ಎಂ.ಎನ್​. ಸೂರಣಗಿ, ರೇಖಾ ಶಿಡೇನೂರ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.