ನ್ಯೂಸ್

ಈ ದಿನದಂದು ಜನಿಸಿದವರು ತಮ್ಮ ಪಾಲಕರಿಗೆ ಅದೃಷ್ಟ ಹೊತ್ತು ತರುತ್ತಾರೆ! ನೀವೂ ಹುಟ್ಟಿದ್ದು ಇದೇ ದಿನಾನಾ? Numerology

Numerology: ಸಾಮಾನ್ಯವಾಗಿ ನಮ್ಮ ನಡುವೆ ಜಾತಕವನ್ನು ನಂಬುವಂತಹ ಅನೇಕ ಜನರಿದ್ದಾರೆ. ಅದೇ ರೀತಿ ನಂಬದವರು ಕೂಡ ಇದ್ದಾರೆ. ಪ್ರತಿಯೊಂದು ಕೆಲಸ, ಕಾರ್ಯಗಳನ್ನು ಮಾಡಬೇಕಾದರೂ ಜೋತಿಷ್ಯದ ಮೊರೆ ಹೋಗುತ್ತಾರೆ. ಜ್ಯೋತಿಷ್ಯದಲ್ಲಿ ಅನೇಕ ಬಗೆಗಳಿರುವುದು ಎಲ್ಲರಿಗೂ ತಿಳಿದಿದೆ. ಅವುಗಳಲ್ಲಿ ಸಂಖ್ಯಾಶಾಸ್ತ್ರ ಮತ್ತು ಹಸ್ತಸಾಮುದ್ರಿಕ ಶಾಸ್ತ್ರವೂ ಒಂದು.

ಸಂಖ್ಯಾಶಾಸ್ತ್ರದ ಪ್ರಕಾರ ವ್ಯಕ್ತಿಯ ಜನ್ಮ ದಿನಾಂಕವು ಅವನ ವ್ಯಕ್ತಿತ್ವದ ಬಗ್ಗೆ ಮತ್ತು ಅವನ ಭವಿಷ್ಯ ಹೇಗಿರುತ್ತದೆ ಎಂಬುದನ್ನು ತಿಳಿಸುತ್ತದೆ. ಅಲ್ಲದೆ, ವೈಯಕ್ತಿಕ ಮತ್ತು ವೃತ್ತಿಪರ ಜೀವನದ ಪ್ರಮುಖ ಅಂಶಗಳ ಬಗ್ಗೆ ಮುನ್ಸೂಚನೆ ಸಹ ನೀಡುತ್ತದೆ. ಸಂಖ್ಯಾಶಾಸ್ತ್ರವನ್ನು ರಾಡಿಕ್ಸ್ ಸಂಖ್ಯೆಗಳ ಆಧಾರದ ಮೇಲೆ ಹೇಳಲಾಗುತ್ತದೆ.

ಒಬ್ಬ ವ್ಯಕ್ತಿಯ ಜನ್ಮ ದಿನಾಂಕದ ಮೊತ್ತವನ್ನು ರಾಡಿಕ್ಸ್ ಸಂಖ್ಯೆ ಅಥವಾ ಮೂಲಾಂಕ ಎಂದು ಕರೆಯಲಾಗುತ್ತದೆ. ಉದಾಹರಣೆಗೆ ಒಬ್ಬ 24ನೇ ತಾರೀಖಿನಂದು ಜನಿಸಿದರೆ ಆತನ ರಾಡಿಕ್ಸ್​ ಸಂಖ್ಯೆ 2+4= 6 ಆಗಿರುತ್ತದೆ. ರಾಶಿಗಳಂತೆ ರಾಡಿಕ್ಸ್​ ಸಂಖ್ಯೆಗಳು ಕೂಡ ಗ್ರಹಗಳೊಂದಿಗೆ ಸಂಬಂಧ ಹೊಂದಿವೆ. ಸಂಖ್ಯಾಶಾಸ್ತ್ರದಲ್ಲಿ 01 ರಿಂದ 09ರವರೆಗಿನ ಸಂಖ್ಯೆಗಳನ್ನು ರಾಡಿಕ್ಸ್ ಸಂಖ್ಯೆಗಳು ಎಂದು ಹೇಳಲಾಗುತ್ತದೆ. ಈ ಒಂಬತ್ತು ರಾಡಿಕ್ಸ್ ಸಂಖ್ಯೆಗಳು ಕೂಡ ನವಗ್ರಹಗಳಲ್ಲಿ ಒಂದೊಂದು ಗ್ರಹಗಳಿಗೆ ಸೀಮಿತವಾಗಿವೆ.

ಸಂಖ್ಯಾಶಾಸ್ತ್ರದ ಪ್ರಕಾರ, ಕೆಲವು ದಿನಾಂಕಗಳಲ್ಲಿ ಜನಿಸಿದವರು ತಮ್ಮ ಹೆತ್ತವರಿಗೆ ಅದೃಷ್ಟವನ್ನು ಹೊತ್ತು ತರುತ್ತಾರೆ. ಈ ಪೋಸ್ಟ್‌ನಲ್ಲಿ, ಅವರ ಮುಂದಿನ ಜೀವನ ಮತ್ತು ಗುಣಗಳು ಹೇಗಿರುತ್ತವೆ ಎಂಬುದನ್ನು ನೀವು ನೋಡಬಹುದು.

ದಿನಾಂಕ 1, 10, 19 ಹಾಗೂ 28

ಈ ಮೇಲಿನ ದಿನಾಂಕಗಳಲ್ಲಿ ಜನಿಸಿದವರು ಸೂರ್ಯ ಭಗವಂತನ ಆಳ್ವಿಕೆಯಲ್ಲಿ ಜನಿಸುತ್ತಾರೆ. ಆದ್ದರಿಂದ ಅವರು ಸ್ವಾಭಾವಿಕವಾಗಿ ನಾಯಕತ್ವದ ಗುಣಗಳನ್ನು ಹೊಂದಿರುತ್ತಾರೆ. ಹೆಚ್ಚಿನ ಪ್ರಯತ್ನವನ್ನು ಮಾಡದಿದ್ದರೂ, ಸುಲಭವಾಗಿ ಜೀವನದಲ್ಲಿ ಉತ್ತುಂಗವನ್ನು ತಲುಪುತ್ತಾರೆ. ಅವರು ಹುಟ್ಟಿನಿಂದ ಅದೃಷ್ಟವಂತರು ಎಂದು ಪರಿಗಣಿಸಲಾಗುತ್ತದೆ. ವಿದ್ಯಾಭ್ಯಾಸ ಮತ್ತು ವೃತ್ತಿಯಲ್ಲಿ ತಂದೆ-ತಾಯಿ ಹೆಮ್ಮೆ ಪಡುವ ರೀತಿಯಲ್ಲಿ ನಡೆದುಕೊಳ್ಳುತ್ತಾರೆ.

ದಿನಾಂಕ 5, 14 ಮತ್ತು 23

ಈ ದಿನಾಂಕಗಳಲ್ಲಿ ಜನಿಸಿದ ಜನರು ಜೀವನದಲ್ಲಿ ವಿವಿಧ ರೀತಿಯಲ್ಲಿ ಯಶಸ್ಸನ್ನು ಗಳಿಸುತ್ತಾರೆ. ಇವರು ಸಂವಹನ ಮತ್ತು ಜ್ಞಾನದ ಗ್ರಹವಾದ ಬುಧದಿಂದ ಆಳಲ್ಪಡುತ್ತಾರೆ. ಹೀಗಾಗಿ ಯಶಸ್ಸು ಸದಾ ಅವರ ಬೆನ್ನ ಹಿಂದಿರುತ್ತದೆ. ವಿದ್ಯಾಭ್ಯಾಸ ಮತ್ತು ವೃತ್ತಿಯಲ್ಲಿ ಇವರು ಖಂಡಿತವಾಗಿಯೂ ಮಿಂಚುತ್ತಾರೆ ಮತ್ತು ಹೆತ್ತವರಿಗೆ ಅದೃಷ್ಟ ಮತ್ತು ಹೆಮ್ಮೆಯನ್ನು ತರುತ್ತಾರೆ.

ದಿನಾಂಕ 7, 16 ಮತ್ತು 25 ( Numerology )

ಈ ದಿನಾಂಕಗಳಲ್ಲಿ ಜನಿಸಿದ ಜನರು ನೆಪ್ಚೂನ್ ಗ್ರಹದಿಂದ ಪ್ರಾಬಲ್ಯ ಸಾಧಿಸುತ್ತಾರೆ. ಅವರು ಉತ್ತಮ ಕಲ್ಪನೆಯನ್ನು ಹೊಂದಿರುತ್ತಾರೆ ಮತ್ತು ಹೊಸ ವಿಷಯಗಳನ್ನು ಪ್ರಯತ್ನಿಸಲು ಹೆಚ್ಚು ಆಸಕ್ತಿ ಹೊಂದಿರುತ್ತಾರೆ. ಪ್ರಪಂಚದ ಬಗ್ಗೆ ಉತ್ತಮ ತಿಳುವಳಿಕೆಯನ್ನು ಹೊಂದಿರುತ್ತಾರೆ. ಇದರಿಂದ ಜೀವನದಲ್ಲಿ ಯಶಸ್ಸಿನತ್ತ ಸುಲಭವಾಗಿ ಸಾಗುತ್ತಾರೆ. ಈ ಮೂಲಕ ಪಾಲಕರ ಮೌಲ್ಯ ಮತ್ತು ಗೌರವವನ್ನು ಹೆಚ್ಚಿಸುತ್ತಾರೆ.

ವಿಶೇಷ ಸೂಚನೆ: ಈ ಮೇಲೆ ಉಲ್ಲೇಖಿಸಲಾದ ಎಲ್ಲ ಮಾಹಿತಿಯನ್ನು ವಿವಿಧ ಮಾಧ್ಯಮಗಳು, ಜ್ಯೋತಿಷಿಗಳು, ಪಂಚಾಂಗಗಳು, ನಂಬಿಕೆಗಳು ಹಾಗೂ ಆಧ್ಯಾತ್ಮಿಕ ಪಠ್ಯಗಳಿಂದ ಸಂಗ್ರಹಿಸಲಾಗಿದೆ. ಮಾಹಿತಿ ನೀಡುವುದು ಮಾತ್ರ ನಮ್ಮ ಉದ್ದೇಶವಾಗಿದ್ದು, ಇದನ್ನು ವಿಜಯವಾಣಿ ವೆಬ್​ಸೈಟ್​ ಜವಾಬ್ದಾರರಾಗಿರುವುದಿಲ್ಲ.