ನ್ಯೂಸ್

ನೀವು ಈ ದಿನಾಂಕಗಳಲ್ಲಿ ಜನಿಸಿದ್ದೀರಾ? ಹಾಗಾದರೆ ಇದೇ ನೋಡಿ ನಿಮ್ಮ ವರ ಮತ್ತು ಶಾಪ! Numerology

Numerology : ಜ್ಯೋತಿಷ್ಯದಲ್ಲಿ ಅನೇಕ ಬಗೆಗಳಿರುವುದು ಎಲ್ಲರಿಗೂ ತಿಳಿದಿದೆ. ಅವುಗಳಲ್ಲಿ ಸಂಖ್ಯಾಶಾಸ್ತ್ರ ಮತ್ತು ಹಸ್ತಸಾಮುದ್ರಿಕ ಶಾಸ್ತ್ರವೂ ಒಂದು. ಸಂಖ್ಯೆಗಳು ನಮ್ಮ ಜೀವನದ ಎಲ್ಲ ವಿಷಯಗಳೊಂದಿಗೆ ಆಳವಾದ ಸಂಬಂಧವನ್ನು ಹೊಂದಿವೆ. ಅಲ್ಲದೆ, ಈ ಸಂಖ್ಯೆಗಳು ನೈಸರ್ಗಿಕವಾಗಿ ವಿಶ್ವದಲ್ಲಿ ವಿಶಿಷ್ಟ ಶಕ್ತಿಯನ್ನು ಹೊಂದಿದ್ದು, ಯಾರನ್ನಾದರೂ ಮೇಲಕ್ಕೇರಿಸಬಹುದು ಮತ್ತು ಕೆಳಗಿಳಿಸಬಹುದು.

ಅಂದಹಾಗೆ ಸಂಖ್ಯಾಶಾಸ್ತ್ರವು ವ್ಯಕ್ತಿಯ ಹೆಸರು, ಆತನ ಹುಟ್ಟಿದ ದಿನಾಂಕ, ತಿಂಗಳು, ವರ್ಷದ ಆಧಾರದ ಮೇಲೆ ಅವರ ಭವಿಷ್ಯದ ಜೀವನ ಹೇಗಿರುತ್ತದೆ ಎಂದು ಊಹಿಸುವ ವಿಜ್ಞಾನವಾಗಿದೆ. ಈ ಸಂಖ್ಯಾಶಾಸ್ತ್ರವನ್ನು ರಾಡಿಕ್ಸ್ ಸಂಖ್ಯೆಗಳ ಆಧಾರದ ಮೇಲೆ ಹೇಳಲಾಗುತ್ತದೆ. ಒಬ್ಬ ವ್ಯಕ್ತಿಯ ಜನ್ಮ ದಿನಾಂಕದ ಮೊತ್ತವನ್ನು ರಾಡಿಕ್ಸ್ ಸಂಖ್ಯೆ ಅಥವಾ ಮೂಲಾಂಕ ಎಂದು ಕರೆಯಲಾಗುತ್ತದೆ. ಉದಾಹರಣೆಗೆ ಒಬ್ಬ 24ನೇ ತಾರೀಖಿನಂದು ಜನಿಸಿದರೆ ಆತನ ರಾಡಿಕ್ಸ್​ ಸಂಖ್ಯೆ 2+4= 6 ಆಗಿರುತ್ತದೆ.

ರಾಶಿಗಳಂತೆ ರಾಡಿಕ್ಸ್​ ಸಂಖ್ಯೆಗಳು ಕೂಡ ಗ್ರಹಗಳೊಂದಿಗೆ ಸಂಬಂಧ ಹೊಂದಿವೆ. ಸಂಖ್ಯಾಶಾಸ್ತ್ರದಲ್ಲಿ 01 ರಿಂದ 09ರವರೆಗಿನ ಸಂಖ್ಯೆಗಳನ್ನು ರಾಡಿಕ್ಸ್ ಸಂಖ್ಯೆಗಳು ಎಂದು ಹೇಳಲಾಗುತ್ತದೆ. ಈ ಒಂಬತ್ತು ರಾಡಿಕ್ಸ್ ಸಂಖ್ಯೆಗಳು ಕೂಡ ನವಗ್ರಹಗಳಲ್ಲಿ ಒಂದೊಂದು ಗ್ರಹಗಳಿಗೆ ಸೀಮಿತವಾಗಿವೆ. ಸಂಖ್ಯೆ ಅಥವಾ ಮೂಲಾಂಕ 2 ಅಂದರೆ 2, 11, 20 ಅಥವಾ 29 ರಂದು ಜನಿಸಿದವರ ಭವಿಷ್ಯದ ಜೀವನವನ್ನು ಹೇಗಿರುತ್ತದೆ ಮತ್ತು ಅವರ ಯಾವ ಗುಣಗಳು ಅವರಿಗೆ ಒಳ್ಳೆಯದನ್ನು ಮಾಡುತ್ತದೆ ಮತ್ತು ಯಾವ ಅಭ್ಯಾಸಗಳನ್ನು ಶಾಪವೆಂದು ಪರಿಗಣಿಸಲಾಗುತ್ತದೆ ಎಂಬುದರ ಕುರಿತು ನಾವೀಗ ತಿಳಿದುಕೊಳ್ಳೋಣ.

ವಿಶೇಷ ಗುಣಗಳು

ಈ ಸಂಖ್ಯೆಯಲ್ಲಿ ಜನಿಸಿದ ಜನರು ಇತರರೊಂದಿಗೆ ಸುಲಭವಾಗಿ ಸಂವಹನ ನಡೆಸುವ ಸಾಮರ್ಥ್ಯವನ್ನು ಹೊಂದಿರುತ್ತಾರೆ. ಇತರರಿಗಿಂತ ಸ್ವಲ್ಪ ಹೆಚ್ಚು ಅನುಮಾನ ಪಡುವವರಾಗಿರುತ್ತಾರೆ. ಇನ್ನೊಬ್ಬರ ಅಗತ್ಯಗಳನ್ನು ಅರ್ಥಮಾಡಿಕೊಂಡು ಸಹಾಯ ಮಾಡುವ ಅವರ ಒಳ್ಳೆಯ ಗುಣಗಳಿಂದಾಗಿ ಕೆಲವೊಮ್ಮೆ ತೊಂದರೆಗೆ ಸಿಲುಕಬಹುದು. ಈ ಸಂಖ್ಯೆಗಳಲ್ಲಿ ಜನಿಸಿದ ಜನರು ಯಾವಾಗಲೂ ಸ್ವತಂತ್ರರಾಗಿರುವುದನ್ನು ಇಷ್ಟಪಡುತ್ತಾರೆ. ಅಲ್ಲದೆ, ಯಾವುದೇ ಸಂಬಂಧಗಳಲ್ಲಿ ಸಿಕ್ಕಿಹಾಕಿಕೊಳ್ಳಲು ಬಯಸುವುದಿಲ್ಲ. ಈ ಗುಣದಿಂದಾಗಿ ಜೀವನದ ಕೊನೆಯ ಹಂತದಲ್ಲಿ ಒಂಟಿತನದಿಂದ ನೋವು ಅನುಭವಿಸಬಹುದು. ಇನ್ನು ಈ ಸಂಖ್ಯೆಗಳಲ್ಲಿ ಜನಿಸಿದ ಜನರು ಕಲೆಗಳಲ್ಲಿ ಅಪಾರ ಆಸಕ್ತಿಯನ್ನು ಹೊಂದಿರುತ್ತಾರೆ ಮತ್ತು ಪ್ರಯಾಣವನ್ನು ತುಂಬಾ ಇಷ್ಟಪಡುತ್ತಾರೆ. ಇವರ ಸಂವಹನ ಕೌಶಲ್ಯವು ಮಾಧ್ಯಮ ಕ್ಷೇತ್ರವು ಸೂಕ್ತ ಉದ್ಯೋಗ ಕ್ಷೇತ್ರವನ್ನಾಗಿ ಮಾಡುತ್ತದೆ.

ಬಲ

2ನೇ ಸಂಖ್ಯೆಯಲ್ಲಿ ಜನಿಸಿದ ಜನರು ಹೆಚ್ಚು ಭಾವನಾತ್ಮಕವಾಗಿರುತ್ತಾರೆ ಆದ್ದರಿಂದ, ಅವರು ಇತರರನ್ನು ಸುಲಭವಾಗಿ ಅರ್ಥಮಾಡಿಕೊಳ್ಳುತ್ತಾರೆ. ಜೀವನದಲ್ಲಿನ ಬದಲಾವಣೆಗಳಿಗೆ ಸುಲಭವಾಗಿ ಹೊಂದಿಕೊಳ್ಳುವ ಸಾಮರ್ಥ್ಯವನ್ನು ಹೊಂದಿರುತ್ತಾರೆ. ಪ್ರೀತಿಯ ವಿಚಾರದಲ್ಲಿ ಯಾವಾಗಲೂ ಹೆಚ್ಚಿನ ಆಸಕ್ತಿ ಮತ್ತು ಶ್ರಮವಿರುತ್ತದೆ. ಇದೇ ಅವರನ್ನು ಯಾವಾಗಲೂ ಉತ್ಸುಕರನ್ನಾಗಿ ಮಾಡುತ್ತದೆ.

ದೌರ್ಬಲ್ಯ

2ನೇ ಸಂಖ್ಯೆಯಲ್ಲಿ ಜನಿಸಿದವರ ದೌರ್ಬಲ್ಯ ಏನೆಂದರೆ, ತಾವು ಕೈಗೊಳ್ಳುವ ಕೆಲಸವನ್ನು ಪೂರ್ಣಗೊಳಿಸಲು ಹೆಚ್ಚು ಸಮಯ ತೆಗೆದುಕೊಳ್ಳುತ್ತಾರೆ. ಇದು ಅವರಲ್ಲಿ ಒತ್ತಡ ಮತ್ತು ಖಿನ್ನತೆಗೆ ಕಾರಣವಾಗಬಹುದು. ಭಾವನಾತ್ಮಕ ಸ್ವಭಾವದಿಂದಾಗಿ, ಪ್ರೀತಿ ಸೇರಿದಂತೆ ಎಲ್ಲ ಸಂಬಂಧಗಳಲ್ಲಿ ಅವರು ಸುಲಭವಾಗಿ ನಿರುತ್ಸಾಹಗೊಳ್ಳುತ್ತಾರೆ. ಇದರಿಂದ ಜೀವನದಲ್ಲಿ ಪ್ರಗತಿ ಸಾಧಿಸಲು ಹೆಚ್ಚು ಕಷ್ಟಪಡಬೇಕಾಗುತ್ತದೆ.

ವಿಶೇಷ ಸೂಚನೆ: ಈ ಮೇಲೆ ಉಲ್ಲೇಖಿಸಲಾದ ಎಲ್ಲ ಮಾಹಿತಿಯನ್ನು ವಿವಿಧ ಮಾಧ್ಯಮಗಳು, ಜ್ಯೋತಿಷಿಗಳು, ಪಂಚಾಂಗಗಳು, ನಂಬಿಕೆಗಳು ಹಾಗೂ ಆಧ್ಯಾತ್ಮಿಕ ಪಠ್ಯಗಳಿಂದ ಸಂಗ್ರಹಿಸಲಾಗಿದೆ. ಮಾಹಿತಿ ನೀಡುವುದು ಮಾತ್ರ ನಮ್ಮ ಉದ್ದೇಶವಾಗಿದ್ದು, ಇದನ್ನು ವಿಜಯವಾಣಿ ವೆಬ್​ಸೈಟ್​ ಜವಾಬ್ದಾರರಾಗಿರುವುದಿಲ್ಲ.