ಶಹಜಾನ್ಪುರ: ಕೊವಿಡ್-19 ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸು ಎಂದು ಹೇಳಿದ್ದಕ್ಕೆ ನರ್ಸಿಂಗ್ ವಿದ್ಯಾರ್ಥಿನಿಯೋರ್ವರು ಆಸ್ಪತ್ರೆಯ ಮೊದಲ ಮಹಡಿಯಿಂದ ಕೆಳಗೆ ಹಾರಿ ಆತ್ಮಹತ್ಯೆ ಯತ್ನ ನಡೆಸಿದ್ದಾರೆ.
ವರುಣ್ ಅರ್ಜುನ್ ವೈದ್ಯಕೀಯ ಕಾಲೇಜಿನಲ್ಲಿ ಮಂಗಳವಾರ ಘಟನೆ ನಡೆದಿದೆ. ವಿದ್ಯಾರ್ಥಿನಿ ತೀವ್ರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇವಳು ಕೊವಿಡ್-19 ಆಸ್ಪತ್ರೆಯಲ್ಲಿ ಕರ್ತವ್ಯ ಮಾಡಲು ನಿರಾಕರಿಸಿದ್ದಕ್ಕೆ ಆಸ್ಪತ್ರೆ ಸಿಬ್ಬಂದಿ ಮಾನಸಿಕ ಕಿರುಕುಳ ನೀಡಿದ್ದಾರೆ. ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕುಟುಂಬದವರು ಆರೋಪ ಮಾಡಿದ್ದಾರೆ.
ನನಗೆ ಯಾವುದೇ ಆರೋಗ್ಯ ವಿಮಾ ಸೌಲಭ್ಯವಿಲ್ಲ. ಸಂಬಳವೂ ಜಾಸ್ತಿ ಇಲ್ಲ. ಅಷ್ಟಾದರೂ ಕೊವಿಡ್-19 ಡ್ಯೂಟಿ ಮಾಡು ಎಂದು ಒತ್ತಡ ಹೇರುತ್ತಿದ್ದಾರೆ ಎಂದು ವಿದ್ಯಾರ್ಥಿನಿ ಸೋಷಿಯಲ್ ಮೀಡಿಯಾದಲ್ಲಿ ಮೊದಲು ವಿಡಿಯೋ ಅಪ್ಲೋಡ್ ಮಾಡಿದ್ದಳು.
ಕುಟುಂಬದವರ ದೂರಿನ ಅನ್ವಯ ಪೊಲೀಸರು ಎಫ್ಐಆರ್ ದಾಖಲು ಮಾಡಿದ್ದಾರೆ. (ಏಜೆನ್ಸೀಸ್)