ನ್ಯೂಸ್

ಬಿಬಿಎಂಪಿ ಡಿಮಾಂಡ್ ನೋಟಿಸ್‌ಗೆ ಆಕ್ಷೇಪ: ಹೈಕೋರ್ಟ್ ಕದತಟ್ಟಿದ ಸಚಿವ ಗುಂಡೂರಾವ್

ಬೆಂಗಳೂರು: ವಾಣಿಜ್ಯ ಕಟ್ಟಡ ನಿರ್ಮಾಣಕ್ಕೆ ನಕ್ಷೆ ಮಂಜೂರಾತಿ ನೀಡಲು ನೆಲ ಬಾಡಿಗೆ, ಪರವಾನಗಿ ಶುಲ್ಕ, ಕೆರೆ ಜೀರ್ಣೋದ್ಧಾರ ಶುಲ್ಕ ಸೇರಿ 41 ಲಕ್ಷ ರೂ.ಗಳಿಗೂ ಅಧಿಕ ಮೊತ್ತದ ವಿವಿಧ ಬಗೆಯ 16ಕ್ಕೂ ಹೆಚ್ಚು ತೆರಿಗೆ, ಶುಲ್ಕಗಳನ್ನು ಪಾವತಿಸುವಂತೆ ಬಿಬಿಎಂಪಿ ಜಾರಿಗೊಳಿಸಿರುವ ಡಿಮಾಂಡ್ ನೋಟಿಸ್ ಪ್ರಶ್ನಿಸಿ ಸಚಿವ ದಿನೇಶ್ ಗುಂಡೂರಾವ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ದಿನೇಶ್ ಗುಂಡೂರಾವ್ ಹಾಗೂ ಅವರ ಪತ್ನಿ ತಬಸ್ಸುಮ್ ಗುಂಡೂರಾವ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಸ್. ಅಶೋಕ್ ಕಿಣಗಿ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ನಗರಾಭಿವೃದ್ಧಿ ಇಲಾಖೆ, ಸಂಸದೀಯ ವ್ಯವಹಾರ ಹಾಗೂ ಶಾಸನ ರಚನಾ ಇಲಾಖೆ, ಬಿಬಿಎಂಪಿ ಮುಖ್ಯ ಆಯುಕ್ತ, ನಗರ ಯೋಜನಾ ಸಹಾಯಕ ನಿರ್ದೇಶಕರಿಗೆ ನೋಟಿಸ್ ಜಾರಿಗೊಳಿಸಿ, ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿತು.